Kumble ಆಸ್ಪತ್ರೆಯ ದಾದಿ ಸಾವು: ಮೃತದೇಹ ಕಲ್ಲಿಕೋಟೆಗೆ
Team Udayavani, Aug 28, 2024, 10:46 PM IST
ಕುಂಬಳೆ: ಬಂದ್ಯೋಡಿನ ಖಾಸಗಿ ಆಸ್ಪತ್ರೆಯ ನರ್ಸಿಂಗ್ ಟ್ರೈನಿಯಾದ ಕೊಲ್ಲಂ ತೆನ್ಮಲ ಉರಕ್ಕುಳಂ ಸ್ಮೃತಿ ಭವನದ ಎಸ್.ಜೆ.ಸ್ಮೃತಿ (20) ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಲ್ಲಿಕೋಟೆಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಸೋಮವಾರ ಮಧ್ಯಾಹ್ನ ಬಂದ್ಯೋಡ್‌ನಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಕಳೆದ ಮೂರು ತಿಂಗಳಿನಿಂದ ಬಂದ್ಯೋಡ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸಿಂಗ್ ಟ್ರೈನಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಹಾಸ್ಟೇಲ್‌ನ ಒಂದನೇ ಮಹಡಿಯ ಕೊಠಡಿಯಲ್ಲಿ ಮಂಚದ ಮೇಲಿನ ಕಬ್ಬಿಣ ಸರಳಿಗೆ ಶಾಲು ಬಳಸಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪುತ್ರಿಯನ್ನು ಕೊಲೆಗೈದು ತೂಗು ಹಾಕಲಾಗಿದೆ ಎಂದು ತಂದೆ ಕೋಮಳ ರಾಜನ್ ದೂರು ನೀಡಿದ್ದರಿಂದ ಮೃತದೇಹವನ್ನು ಕಲ್ಲಿಕೋಟೆಗೆ ಕೊಂಡೊಯ್ಯಲಾಗಿದೆ.
ನಕಲಿ ಲಾಟರಿ ಮಾರಾಟ : ಕೇಸು ದಾಖಲು
ಉಪ್ಪಳ: ಲಾಟರಿ ನಿಯಮವನ್ನು ಉಲ್ಲಂಘಿಸಿ ಆನ್‌ಲೈನ್ ಮೂಲಕ ಕೇರಳ ರಾಜ್ಯಲಾಟರಿಯ ನಕಲಿ ಲಾಟರಿ ಮಾರಾಟ ಮಾಡಿದ ಆರೋಪದಂತೆ ಮಂಜೇಶ್ವರ ಪೊಲೀಸರು ಮಜೀರ್ಪಳ್ಳದಲ್ಲಿ ಲಾಟರಿ ಏಜೆಂಟ್ ಆಗಿರುವ ಜೋಜೋ ವಿರುದ್ಧ ಕೇಸು ದಾಖಲಿಸಿದ್ದಾರೆ.
ಇದಕ್ಕೆ ಬಳಸಿದ ಲ್ಯಾಪ್‌ಟಾಪ್ ಹಾಗು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ತನಿಖೆಯನ್ನು ತೀವ್ರಗೊಳಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.