D. K. Shivakumar ಅಕ್ರಮ ಆಸ್ತಿ: ವಿಚಾರಣೆ ಸಿಬಿಐಗೋ, ಅಲ್ಲವೋ?

ಪ್ರಕರಣದಲ್ಲಿ ಇಂದು ಹೈಕೋರ್ಟ್‌ ಮಹತ್ವದ ತೀರ್ಪು;  ಸಿಬಿಐ ತನಿಖೆ ವಾಪಸ್‌ ಪಡೆದಿದ್ದ ರಾಜ್ಯ ಸರಕಾರ

Team Udayavani, Aug 29, 2024, 7:10 AM IST

D. K. Shivakumar ಅಕ್ರಮ ಆಸ್ತಿ: ವಿಚಾರಣೆ ಸಿಬಿಐಗೋ, ಅಲ್ಲವೋ?

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪ ಎದು ರಿಸುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪಾಲಿಗೆ ನ್ಯಾಯಾಲಯದಲ್ಲಿ ಗುರುವಾರ ನಿರ್ಣಾಯಕ ದಿನವಾಗಲಿದೆ. ಪ್ರಕರಣದ ತನಿಖೆಗೆ ಎಂದು ಸಿಬಿಐಗೆ ನೀಡಲಾ ಗಿದ್ದ ಅನುಮತಿ ಯನ್ನು ವಾಪಸ್‌ ಪಡೆದಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಹೈಕೋರ್ಟ್‌ ತೀರ್ಪು ಪ್ರಕಟಿಸಲಿದೆ.

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರಕಾರದ ಅವಧಿಯಲ್ಲಿ ಅನುಮತಿಯನ್ನು ನೀಡಲಾಗಿತ್ತು.ಅದನ್ನು ಈಗಿನ ಸರಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿ ಸಿದ್ದ ಪ್ರತ್ಯೇಕ ಅರ್ಜಿ ಸಂಬಂಧ ಕಾದಿರಿಸಿದ್ದ ತೀರ್ಪನ್ನು ನ್ಯಾ| ಕೆ. ಸೋಮ ಶೇಖರ್‌ ನೇತೃತ್ವದ ವಿಭಾಗೀಯ ಪೀಠ ಗುರುವಾರ ಪ್ರಕಟಿಸಲಿದೆ.

ಏನಿದು ಪ್ರಕರಣ? ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣ ಸಂಬಂಧ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿ ಬಿ.ಎಸ್‌. ಯಡಿಯೂರಪ್ಪ ಸಿಎಂ ಆಗಿದ್ದಾಗ 2019ರ ಸೆ. 25ರಂದು ಆದೇಶ ಹೊರಡಿಸಲಾಗಿತ್ತು. ಅದರಂತೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳಡಿ 2020ರ ಅಕ್ಟೋಬರ್‌ನಲ್ಲಿ ಸಿಬಿಐ ಎಫ್ಐಆರ್‌ ದಾಖಲಿಸಿಕೊಂಡಿತ್ತು. ಅದನ್ನು ರದ್ದುಪಡಿಸಬೇಕು ಎಂದು ಶಿವಕುಮಾರ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2023ರ ಫೆಬ್ರವರಿಯಲ್ಲಿ ನ್ಯಾಯಾಲಯ ಸಿಬಿಐ ತನಿಖೆಗೆ ಮಧ್ಯಾಂತರ ತಡೆ ನೀಡಿತ್ತು. ಇದೇ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಡಿಕೆಶಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು,ಅದನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಅದರ ವಿರುದ್ಧ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ಬಾಕಿ ಇದ್ದಾಗಲೇ ಸಿಬಿಐ ತನಿಖೆಗೆ ಹಿಂದಿನ ಸರಕಾರ ನೀಡಿದ್ದ ಅನುಮತಿಯನ್ನು ಈಗಿನ ರಾಜ್ಯ ಸರಕಾರ 2023ರ ನವೆಂಬರ್‌ನಲ್ಲಿ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಬಸವನಗೌಡ ಪಾಟೀಲ್‌ ಯತ್ನಾಳ್‌ 2023ರ ಡಿಸೆಂಬರ್‌ ಹಾಗೂ 2024ರ ಜನ‌ವರಿ ಯಲ್ಲಿ ಸಿಬಿಐ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಭಾಗೀಯ ನ್ಯಾಯಪೀಠ ಆಗಸ್ಟ್‌ 12ರಂದು ತೀರ್ಪು ಕಾದಿರಿಸಿತ್ತು.

ಏನಿದು ಪ್ರಕರಣ?
-ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಕ್ರಮ ಆಸ್ತಿ ಪ್ರಕರಣ
-2019ರ ಸೆ.25ರಂದು ಸಿಬಿಐಗೆ ಕೇಸ್‌ ವಹಿಸಿದ್ದ ಆಗಿನ ಸಿಎಂ ಬಿ.ಎಸ್‌.ಯಡಿಯೂರಪ್ಪ
-2023ರ ನವೆಂಬರ್‌ನಲ್ಲಿ ಸಿಬಿಐ ತನಿಖೆ ಆದೇಶ ಹಿಂಪ ಡೆದ ಸರಕಾರ
-ಈ ಕ್ರಮ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಬಸನಗೌಡ ಯತ್ನಾಳ್‌
-ಪ್ರಕರಣ ಸಿಬಿಐಗೆ ವಹಿಸಿದ್ದು ಸರಿಯೋ, ತಪ್ಪೋ?: ಇಂದು ನಿರ್ಧಾರ

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.