Encounter: ಸೇನಾ ಕಾರ್ಯಾಚರಣೆ… ಜಮ್ಮು-ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ
Team Udayavani, Aug 29, 2024, 10:42 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಬುಧವಾರ (ಆಗಸ್ಟ್ 28) ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಕನಿಷ್ಠ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಪ್ರಕಾರ, ಬುಧವಾರ ಕುಪ್ವಾರದ ಮಚಿಲ್ ಸೆಕ್ಟರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುಹಾಕಿದ್ದು, ಕುಪ್ವಾರದ ತಂಗ್ಧರ್ ಸೆಕ್ಟರ್ನಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆಗಸ್ಟ್ 28-29 ರ ಮಧ್ಯರಾತ್ರಿಯಲ್ಲಿ, ತಂಗ್ಧರ್ ಸೆಕ್ಟರ್ನಲ್ಲಿ ಭಯೋತ್ಪಾದಕರು ಕಾಣಿಸಿಕೊಂಡ ನಂತರ ಭದ್ರತಾ ಪಡೆಗಳು ಬೃಹತ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಹತ್ಯೆಮಾಡಲಾಗಿದ್ದು ಇದೆ ವೇಳೆ, ಮಚಿಲ್ ಸೆಕ್ಟರ್ನಲ್ಲಿ ಮತ್ತೊಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಭಯೋತ್ಪಾದಕರು ಅರಣ್ಯ ಪ್ರದೇಶದಲ್ಲಿ ಸಕ್ರಿಯರಾಗಿರುವ ಮಾಹಿತಿಯ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ಮತ್ತೆ ಮುಂದುವರೆಸಿದೆ.
ಇದನ್ನೂ ಓದಿ: Ballari: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್… ಪೊಲೀಸರಿಂದ ಬ್ಯಾಗ್ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.