![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 29, 2024, 12:34 PM IST
ದಾವಣಗೆರೆ: ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಗುರುವಾರ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಾಂವಿಧಾನಿಕ ರಾಜ್ಯಪಾಲರ ಹುದ್ದೆಯನ್ನು ಕೆಲವಾರು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಸಾಂವಿಧಾನಿಕ, ಪ್ರಜಾತಾಂತ್ರಿಕ ಆಶಯಗಳು ಮೂಲೆ ಗುಂಪಾಗುತ್ತಿವೆ. ಹಾಗಾಗಿ ರಾಷ್ಟ್ರಪತಿಯವರು ರಾಜ್ಯಪಾಲರ ಹುದ್ದೆಯನ್ನೇ ರದ್ದು ಪಡಿಸಿ, ವಿಧಾನಸಭಾ ಮತ್ತು ವಿಧಾನ ಪರಿಷತ್ತು ಅಧ್ಯಕ್ಷರಿಗೆ ರಾಜ್ಯಪಾಲರ ಅಧಿಕಾರ ನೀಡುವಂತಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರ್ನಾಟಕದ ರಾಜ್ಯಪಾಲರು ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನ ವಿರೋಧಿ ಕ್ರಮ. ಕೇಂದ್ರ ಸರ್ಕಾರದ ಬಿಜೆಪಿಯ ಕೈಗೊಂಬೆಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನ ಅಸ್ತಿರಗೊಳಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದು ದೂರಿದರು.
ಮಹಾನಗರ ಪಾಲಿಕೆ ಮಾಜಿ ಸದಸ್ಯ ಆವರಗೆರೆ ಎಚ್.ಜಿ. ಉಮೇಶ್, ಆವರಗೆರೆ ವಾಸು, ಆವರಗೆರೆ ಚಂದ್ರು, ಐರಣಿ ಚಂದ್ರು, ಆವರಗೆರೆ ಬಾನಪ್ಪ, ಶಾರದಮ್ಮ, ಸರೋಜಾ ಇತರರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.