Congress ನಾಳೆ “ಕೈ’ ನಾಯಕರ ರಾಜಭವನ ಚಲೋ; ಸಿಎಂ ಪರವಾಗಿ ಶಕ್ತಿ ಪ್ರದರ್ಶನ
ಎಚ್‌ಡಿಕೆ ಸೇರಿ ಇತರರ ವಿರುದ್ಧದ ಕೇಸ್ ಅಭಿಯೋಜನೆಗೆ ಆಗ್ರಹ
Team Udayavani, Aug 30, 2024, 6:40 AM IST
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿ ಹಲವರ ವಿಚಾರಣೆಗೆ ಅನುಮತಿ ಕೋರಿ ರಾಜ್ಯಪಾಲರ ಮುಂದೆ ಇರುವ ಎಲ್ಲ ಪ್ರಕರಣಗಳ ಅಭಿಯೋಜನೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಶನಿವಾರ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಪರ ಇದು ಪಕ್ಷದ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.
ಬೆಳಗ್ಗೆ 10.30ಕ್ಕೆ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಆರಂಭಗೊಂಡು, ರಾಜಭವನದಲ್ಲಿ ಅಂತ್ಯಗೊಳ್ಳಲಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದ್ದು, ಎಲ್ಲ ಸಚಿವರು, ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.
ವಿಶೇಷವಾಗಿ ಕೆಲವು ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ನೀಡಿಲ್ಲ. ಆದರೆ ಪ್ರಾಥಮಿಕ ತನಿಖೆ ನಡೆಯದಿದ್ದರೂ ಸಿಎಂ ವಿರುದ್ಧ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ಈ ಧೋರಣೆ ಖಂಡ ನೀಯ. ಈ ತಾರತಮ್ಯ ಯಾಕೆ ಎಂದು ಪ್ರಶ್ನಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.