Chalavadi Narayanaswamy ಒಬ್ಬ ಶೆಡ್ ಗಿರಾಕಿ: ಎಂ.ಬಿ. ಪಾಟೀಲ್
ಖರ್ಗೆ ಕುಟುಂಬದ ವಿರುದ್ಧ ಧ್ವನಿ ಎತ್ತಿದ್ದ ಛಲವಾದಿ ವಿರುದ್ಧ ತಿರುಗಿಬಿದ್ದ ಕೈ ಪಡೆ
Team Udayavani, Aug 30, 2024, 12:04 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ಸಿಎ ನಿವೇಶನ ಕೊಟ್ಟಿದ್ದನ್ನು ಪ್ರಶ್ನಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್ ಸರಕಾರ ತಿರುಗಿಬಿದ್ದಿದೆ.
ಇತ್ತೀಚೆಗಷ್ಟೇ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದರು. ಇದೀಗ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕೂಡ ಹರಿಹಾಯ್ದಿದ್ದು, ಖರ್ಗೆ ಕುಟುಂಬದ ವಿರುದ್ಧ ಎಗರಾಡುತ್ತಿರುವ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ. 2006ರಲ್ಲಿ ಮೈಸೂರಿನ ಹೆಬ್ಟಾಳದಲ್ಲಿ 2 ಎಕರೆ ಜಾಗ ಪಡೆದುಕೊಂಡಿರುವ ಅವರು 18 ವರ್ಷಗಳಾದರೂ ಅಲ್ಲಿ ಏನೂ ಮಾಡದೆ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ. ಅವರೊಬ್ಬ ಶೆಡ್ ಗಿರಾಕಿ ಎಂದು ಜರೆದಿದ್ದಾರೆ.
ಹೌದು ನಾನು ಶೆಡ್ ಗಿರಾಕಿ…
ಹೌದು ನಾನು ಶೆಡ್ ಗಿರಾಕಿ; ನಿಮ್ಮಂತೆ ದೊಡ್ಡ ಗಿರಾಕಿ ಅಲ್ಲ. ನನಗೆ ಕೊಟ್ಟಿರುವ ಜಮೀನನ್ನು ಅದು ಹೇಗೆ ಹಿಂಪಡೆಯುತ್ತೀರೋ ನೋಡುತ್ತೇನೆ. ದೇಶದಲ್ಲಿ ನ್ಯಾಯಾಂಗ ಎಂಬುದೊಂದು ಇದೆ ಎಂದು ಸಚಿವ ಎಂ.ಬಿ. ಪಾಟೀಲ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.