Sand; ಕೇಂದ್ರದಿಂದ ಸಿಗದ ಅನುಮೋದನೆ ಕೈಗೆ ಸಿಗದ ಸಿಆರ್‌ಝಡ್ ಮರಳು
Team Udayavani, Aug 30, 2024, 1:20 PM IST
ಮಂಗಳೂರು: ಮೂರು ವರ್ಷಗಳಿಂದ ಸಿಆರ್‌ಝಡ್ ವಲಯದ ಮರಳುಗಾರಿಕೆ ಬಗೆ ಗಿನ ಗೊಂದಲ ಬಗೆಹರಿಯದ ಕಾರಣ ಕರಾವಳಿ ಯಾದ್ಯಂತ ಅಧಿಕೃತ ಮರಳು ಪೂರೈಕೆ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆದರೆ ಸಿಆರ್‌ಝಡ್ ಪ್ರದೇಶದಲ್ಲಿ ಕಾನೂನು ಬಾಹಿರ ಮರಳು ಗಾರಿಕೆ ನಿರಾತಂಕವಾಗಿ ನಡೆಯುತ್ತಿದೆ!
ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಿನಲ್ಲಿ ಸಿಆರ್‌ಝಡ್‌ನಲ್ಲಿ ಮರಳುಗಾರಿಕೆಗೆ ನಿಷೇಧ ಇರುತ್ತದೆ. ಬಳಿಕ ನದಿಗಳಲ್ಲಿ ಮರಳಿನ ಸಂಗ್ರಹದ ಅಧ್ಯಯನ ನಡೆಸಿ, ವರದಿಯೊಂದಿಗೆ ಕರ್ನಾಟಕ ರಾಜ್ಯ ಕರಾವಳಿ ನಿರ್ವಹಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯಲಾಗುತ್ತದೆ. ಅನಂತರ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿ ಅನುಮತಿ ನೀಡಲಾಗುತ್ತದೆ.
ಈ ಬಾರಿ ಸಮೀಕ್ಷೆ ನಡೆಸಿ, ವರದಿ ಸಹಿತ ರಾಜ್ಯ ಪ್ರಾಧಿಕಾರಕ್ಕೆ ಪ್ರಸ್ತಾವನೆ ಹೋಗಿ ಏಳು ತಿಂಗಳುಗಳು ಕಳೆದಿವೆ. ಸಿಆರ್‌ಝಡ್ ವ್ಯಾಪ್ತಿಯ ಮರಳು ದಿಬ್ಬಗಳಿಂದ ಮರಳು ತೆಗೆಯುವ ಕುರಿತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಿಂದ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಕ್ತ ನಿರ್ದೇಶನಗಳನ್ನು ಕೋರಿತ್ತು.
ಈ ಬಗ್ಗೆ ಸರಕಾರದ ಅರಣ್ಯ, ಪರಿಸರ ಇಲಾಖಾ ಕಾರ್ಯದರ್ಶಿಗಳು ಉತ್ತರಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸುವ ಪ್ರಸ್ತಾವನೆಗೆ ಸಂಬಂಧಿಸಿ ಕೇಂದ್ರ ಸರ ಕಾರ ದಿಂದ ಹೊರಡಿಸುವ ಆದೇಶವನ್ನು ನಿರೀಕ್ಷಿಸುವಂತೆ ತಿಳಿಸಿತ್ತು.
ಅಕ್ರಮ ಮರಳು ಕಾರುಭಾರು ನಿರಾತಂಕ
ಸದ್ಯ ಉಭಯ ಜಿಲ್ಲೆಗಳಲ್ಲಿ ಮರಳು ಬೇಕಾದವರಿಗೆ ರಾತೋರಾತ್ರಿ ಸಿಆರ್‌ಝಡ್ ಪ್ರದೇಶದ ನಯವಾದ ಉತ್ತಮ ದರ್ಜೆ ಮರಳನ್ನು ಪೂರೈಸುವ ಜಾಲವೇ ಇದೆ. ಇದು ಒಂದು ಲೋಡ್‌ಗೆ 5ರಿಂದ 6,000 ರೂ.ಗೆ ಸಿಗುತ್ತದೆ. ಅಧಿಕಾರಿಗಳು ಇದನ್ನು ನಿಯಂತ್ರಿಸುವ ಗೋಜಿಗೂ ಹೋಗುತ್ತಿಲ್ಲ.
ಕೇಂದ್ರದಿಂದ ಮಾಹಿತಿ ಇಲ್ಲ
ಕೇಂದ್ರ ಸರಕಾರದ ಪರಿಸರ, ಸಿಆರ್‌ಝಡ್, ಕೈಗಾರಿಕೆ ಹಾಗೂ ಅರಣ್ಯ ಇಲಾಖೆಗಳ ಕಾರ್ಯದರ್ಶಿಗಳು ಸಭೆ ನಡೆಸಿ ಈ ಕುರಿತ ಅಂತಿಮ ನಿರ್ಣಯ ಕೈಗೊಳ್ಳಬೇಕಾಗಿದ್ದು, ಇದಕ್ಕೆ ರಾಜ್ಯ ಸರಕಾರ ಒತ್ತಡ ಹಾಕಬೇಕಾಗುತ್ತದೆ. ಆದರೆ ಹಿಂದೆಲ್ಲ ಆಗಸ್ಟ್ ತಿಂಗಳಿನಲ್ಲಿ ನಡೆಯುತ್ತಿದ್ದ ಸಭೆ ಈ ಬಾರಿ ನಡೆದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ ಸುಮಾರು 16 ಬ್ಲಾಕ್ ಗುರುತಿಸಲಾಗಿತ್ತಾದರೂ ಸದ್ಯ ಮಳೆ ಇರುವ ಕಾರಣ ಮರಳು ತೆಗೆಯುವುದು ಸಾಧ್ಯವಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.