Mangaluru ಎಂಡಿಎಂಎ ಸಾಗಾಟ: ಮತ್ತೆ ಮೂವರ ಸೆರೆ
Team Udayavani, Aug 30, 2024, 1:29 AM IST
ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು 42 ಗ್ರಾಂ ಎಂಡಿಎಂಎ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಕಳನಾಡು ಚಂದ್ರಗಿರಿ ಕೀಯೂರ್ ಹೌಸ್ ನಿವಾಸಿ ಶಾಜಹಾನ್ ಪಿ.ಎಂ.(32), ಅಡೂರು, ದೇಲಂಪಾಡಿಯ ದೇವರಡ್ಕ ನಿವಾಸಿ ಮೊಹಮ್ಮದ್ ನಿಶಾದ್(27) ಮತ್ತು ಮಡಿಕೇರಿಯ ಅಬ್ಬೆ ಪಾಲ್ಸ್ಗೆ ಹೋಗುವ ರಸ್ತೆಯ ಮುತ್ತಪ್ಪ ದೇವಸ್ಥಾನ ಬಳಿಯ ನಿವಾಸಿ ಮನ್ಸೂರು ಎಂ.ಎಂ.(27) ಬಂಧಿತರು.
ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿ ಕಾರಿನಲ್ಲಿ ಮಂಗಳೂರಿಗೆ ತರಲಾಗಿತ್ತು. ಸುರತ್ಕಲ್ ಎನ್ಐಟಿಕೆ – ಮುಕ್ಕ ಪರಿಸರದಲ್ಲಿ ಮಾದಕ ವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಿಂದ 2.10 ಲಕ್ಷ ರೂ. ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 12.18 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಶಾಜಹಾನ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆ ಮೇಲ್ಪರಂಬ, ಬೇಕಲಂ, ವಿದ್ಯಾನಗರ, ಕುಂಬಳೆ, ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ/ಸೇವನೆಗೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಮೊಹಮ್ಮದ್ ನಿಶಾದ್ ವಿರುದ್ಧ ಪುತ್ತೂರು ನಗರ ಹಾಗೂ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್ಐ ನರೇಂದ್ರ ಮತ್ತು ಸಿಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.