Bomb Threat: 5 ಬಾಂಬ್ ಇಟ್ಟಿದ್ದೇವೆ, ಶಾಲೆ ಸ್ಫೋಟಿಸುತ್ತೇವೆ: ಹುಸಿ ಸಂದೇಶ
ದಿ ನ್ಯೂ ಇಂಡಿಯನ್ ಪಬ್ಲಿಕ್ ಶಾಲೆಗೆ ದುಷ್ಕರ್ಮಿಗಳ ಬೆದರಿಕೆ
Team Udayavani, Aug 30, 2024, 11:30 AM IST
ಬೆಂಗಳೂರು: ನಗರದ ಖಾಸಗಿ ಶಾಲೆಗಳ ಇ-ಮೇಲ್ಗಳಿಗೆ ಹುಸಿ ಬಾಂಬ್ ಸಂದೇಶ ಬರುವುದು ಮತ್ತೆ ಮುಂದುವರಿದಿದೆ.
ನಾಗವಾರದ ಖಾಸಗಿ ಶಾಲೆಯೊಂದಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳಿಸಿದ್ದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಗುರುವಾರ ಬೆಳಗ್ಗೆ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.
ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಾನ್ಯತಾ ಟೆಕ್ ಪಾರ್ಕ್ ಮುಂಭಾ ಗದಲ್ಲಿರುವ ದಿ ನ್ಯೂ ಇಂಡಿ ಯನ್ ಪಬ್ಲಿಕ್ ಶಾಲೆಗೆ ದುಷ್ಕರ್ಮಿಗಳು ಗುರುವಾರ ಮುಂಜಾನೆ 6.57ಕ್ಕೆ ಇ- ಮೇಲ… ಮೂಲಕ ಶಾಲೆ ಆವರಣದಲ್ಲಿ 5 ಪೈಪ್ಲೈನ್ ಬಾಂಬ್ಗಳನ್ನು ಇಡಲಾಗಿದೆ. ಅವುಗಳ ಮಧ್ಯಾಹ್ನ 1.30ಕ್ಕೆ ಸ್ಫೋಟಗೊಳಲಿದೆ ಎಂದು ಫಾದರ್ ಕೊಡಾಚಿ ಹೆಸರಿನ [email protected] ಹಾಗೂ [email protected] ಎಂಬ ಇ-ಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಕಳುಹಿಸಿದ್ದರು.
ಅದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿಯು ಕೂಡಲೇ ಮಕ್ಕ ಳಿಗೆ ರಜೆ ನೀಡಿ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ಶಾಲೆ ಒಳಭಾಗ ಹಾಗೂ ಹೊರಭಾಗದ ಪ್ರತಿಯೊಂದು ಜಾಗದಲ್ಲೂ ತಪಾಸಣೆ ನಡೆಸಿದ್ದರು. ಆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಖಚಿತಪಡಿಸಿದ್ದು, ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ನಿಟ್ಟುಸಿರು ಬಿಟ್ಟರು. ಶಾಲೆಯ ಆಡಳಿತಾಧಿಕಾರಿ ಪದ್ಮಿನಿ ರಾಘವೇಂದ್ರ ಎಂಬು ವರು ನೀಡಿದ ದೂರಿನ ಮೇರೆಗೆ ದುಷ್ಕ ರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.