Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್ ಹಾಡಿನಲ್ಲಿ ರಚೆಲ್-ಪ್ರಮೋದ್
Team Udayavani, Aug 30, 2024, 3:43 PM IST
“ಭುವನಂ ಗಗನಂ’- ಹೀಗೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಪೃಥ್ವಿ ಅಂಬರ್ ಹಾಗೂ ಪ್ರಮೋದ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ.
ಇತ್ತೀಚೆಗೆ ಚಿತ್ರದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆಯುತ್ತದೆ. ನಟ ಸುದೀಪ್ ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ರಚೆಲ್ ಹಾಗೂ ಪ್ರಮೋದ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಸುಂದರವಾದ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಭುವನಂ ಗಗನಂ ಎಂದು ಶುರುವಾಗುವ ಹಾಡಿಗೆ ಅನಿರುದ್ಧ ಶಾಸ್ತ್ರೀ ಪದ ಪೊಣಿಸಿದ್ದು, ಅರ್ಮಾನ್ ಮಲ್ಲಿಕ್ ಹಾಗೂ ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದಾರೆ. ಗುಮ್ಮಿನೇನಿ ವಿಜಯ್ ಈ ಮಧುರ ಗೀತೆಗೆ ಟ್ಯೂನ್ ಹಾಕಿದ್ದಾರೆ. ಎಸ್‌ವಿಸಿ ಫಿಲಂಸ್‌ನಡಿ ಎಂ.ಮುನೇಗೌಡ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
“ಇದೊಂದು ಫ್ಯಾಮಿಲಿ ಡ್ರಾಮಾ. ಕಥೆ ಎರಡು ಟ್ರ್ಯಾಕ್‌ನಲ್ಲಿ ನಡೆಯುತ್ತದೆ. ಪ್ರಮೋದ್ ಹಾಗೂ ಪೃಥ್ವಿ ಅವರ ಟ್ರ್ಯಾಕ್ ಗಳು ಬೇರೆ ಬೇರೆಯಾಗಿ ಸಾಗುತ್ತಾ ಬಂದು ಒಂದು ಹಂತದಲ್ಲಿ ಜೊತೆಯಾಗುತ್ತದೆ. ಅದು ಯಾಕೆ, ಅದಕ್ಕೆ ಕಾರಣ ಏನು, ಮುಂದೇನಾಗುತ್ತದೆ ಎಂಬುದೇ ಸಿನಿಮಾದ ಹೈಲೈಟ್. ಸಾಕಷ್ಟು ಹೊಸ ಅಂಶಗಳೊಂದಿಗೆ ಈ ಸಿನಿಮಾ ತಯಾರಾಗಿದೆ. ಇಡೀ ತಂಡದ ಪ್ರೋತ್ಸಾಹದಿಂದ ಸಿನಿಮಾ ಅಂದುಕೊಂಡಂತೆ ಮೂಡಿ ಬಂದಿದೆ’ ಎನ್ನು ವುದು ನಿರ್ದೇಶಕರ ಮಾತು.
ಪ್ರಮೋದ್‌ಗೆ ಜೋಡಿ ಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗ ದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ, ವಿಜಯ್ ಸಂಗೀತ, ಸುನೀಲ್ ಕಶ್ಯಪ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.