Central Government: ಉದ್ಯೋಗಸ್ಥ ಮಹಿಳೆಯರಿಗೆ ಸರಕಾರದಿಂದ ಸುರಕ್ಷೆಯ ಅಭಯ
Team Udayavani, Aug 31, 2024, 6:00 AM IST
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಮತ್ತು ಮೇಲ್ವಿಚಾರಣೆಗಾಗಿ ಕೇಂದ್ರ ಸರಕಾರ ಶಿ- ಬಾಕ್ಸ್ ಪೋರ್ಟಲ್ ಅನ್ನು ಆರಂಭಿಸಿದೆ. ಕೇಂದ್ರ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಈ ಪೋರ್ಟಲ್ ರೂಪಿಸಿದ್ದು, ಇನ್ನು ಮುಂದೆ ಮಹಿಳಾ ಉದ್ಯೋಗಿಗಳು ತಾವು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಯಾವುದೇ ಲೈಂಗಿಕ ಕಿರುಕುಳ ಅಥವಾ ದೌರ್ಜನ್ಯಕ್ಕೀಡಾದಲ್ಲಿ ಈ ಪೋರ್ಟಲ್‌ನ ಮೂಲಕ ದೂರನ್ನು ದಾಖಲಿಸಬಹುದಾಗಿದೆ.
ಇಂತಹ ದೂರುಗಳ ಬಗೆಗೆ ಸಂಬಂಧಿತ ಅಧಿಕಾರಿಗಳು ತತ್‌ಕ್ಷಣ ಸ್ಪಂದಿಸುವುದರ ಜತೆಯಲ್ಲಿ ದೂರುಗಳ ವಿಲೇವಾರಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳ ಮೇಲ್ವಿಚಾರಣೆಗೆ ನೆರವಾಗಲಿದೆ.
ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧೆಡೆ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ದೇಶಾದ್ಯಂತ ಮಹಿಳಾ ಸಮುದಾಯ ಆತಂಕಕ್ಕೀಡಾಗಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಯಾ ಕೆಲಸದ ಸ್ಥಳಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಅತ್ಯಂತ ಮಹತ್ವದ ಉಪಕ್ರಮಕ್ಕೆ ಚಾಲನೆ ನೀಡಿದೆ.
ಮಹಿಳಾ ಉದ್ಯೋಗಿಗಳಲ್ಲಿ ಧೈರ್ಯ ತುಂಬಿ, ಸುರಕ್ಷೆಯ ಮನೋಭಾವವನ್ನು ಮೂಡಿಸುವುದರ ಜತೆಯಲ್ಲಿ ಕೆಲಸದ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸಲು ಪೂರಕವಾದ ಉತ್ತಮ ವಾತಾವರಣವನ್ನು ರೂಪಿಸುವ ನಿಟ್ಟಿನಲ್ಲಿ ಈ ಪೋರ್ಟಲ್ ಸಹಕಾರಿಯಾಗಲಿದೆ. ಸಂತ್ರಸ್ತರಿಗೆ ಕ್ಷಿಪ್ರವಾಗಿ ದೂರು ದಾಖಲಿಸಲು ಮತ್ತು ಇದರಿಂದ ತಪ್ಪಿತಸ್ಥರನ್ನು ತತ್‌ಕ್ಷಣ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯಕವಾಗಲಿದೆ. ಇಂತಹ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಈ ಪೋರ್ಟಲ್ ಪರಿಣಾಮಕಾರಿಯಾಗಿದೆ. ದೂರುದಾರರು ಮತ್ತು ಅವರ ಬಗೆಗಿನ ಎಲ್ಲ ಮಾಹಿತಿಗಳನ್ನು ಗೌಪ್ಯವಾಗಿರಿಸಲಾಗುವುದು ಎಂದು ಸರಕಾರ ಸ್ಪಷ್ಟಪಡಿಸಿದ್ದು ಈ ಬಗ್ಗೆ ಯಾರಿಗೂ ಯಾವುದೇ ತೆರನಾದ ಸಂದೇಹ ಬೇಡ ಎಂದು ಅಭಯ ನೀಡಿದೆ.
ದೇಶದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಕೇಂದ್ರ ಸರಕಾರ ಪ್ರಸಕ್ತ ಸಾಲಿನ ಮುಂಗಡಪತ್ರದಲ್ಲಿ ವಿವಿಧ ಕೌಶಲಾಭಿವೃದ್ಧಿ ತರಬೇತಿ ಯೋಜನೆಗಳನ್ನು ಘೋಷಿಸಿದೆ. ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ವೃತ್ತಿಗಳಲ್ಲಿ ಹೆಣ್ಣು ಮಕ್ಕಳ ಕೌಶಲವನ್ನು ಹೆಚ್ಚಿಸುವುದರ ಜತೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ರೂಪಿಸಿ, ಅವರನ್ನು ಸ್ವಾವಲಂಬಿಗಳಾಗಿಸಲು ಸರಕಾರ ಮುಂದಡಿ ಇರಿಸಿದೆ.
ದೇಶದ ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ “ವಿಕಸಿತ ಭಾರತ’ ನಿರ್ಮಾಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಜತೆಯಲ್ಲಿ ಪುರುಷರಿಗೆ ಸರಿಸಮಾನರಾಗಿಸಲು ಸರಕಾರ ಸಂಕಲ್ಪ ತೊಟ್ಟಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಅಭದ್ರತೆಯ ಭೀತಿ ಕಾಡಿದಲ್ಲಿ ಸರಕಾರದ ಈ ಮಹದಾಸೆ ಈಡೇರುವುದು ಕಷ್ಟಸಾಧ್ಯ. ಇದರ ನಡುವೆ ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಣ ಕಿರುಕುಳದ ಪ್ರಕರಣಗಳು ಕೇವಲ ಮಹಿಳೆಯರನ್ನು ಮಾತ್ರವಲ್ಲದೆ ಇಡೀ ಸಮಾಜವನ್ನು ಒಂದಿಷ್ಟು ಚಿಂತೆಗೀಡು ಮಾಡಿದೆ.
ಈ ಎಲ್ಲ ನಕಾರಾತ್ಮಕ ಬೆಳವಣಿಗೆಗಳ ನಡುವೆ ಕೇಂದ್ರ ಸರಕಾರ ಶಿ-ಬಾಕ್ಸ್ ಪೋರ್ಟಲ್‌ಗೆ ಚಾಲನೆ ನೀಡುವ ಮೂಲಕ ಹೆಣ್ಣು ಮಕ್ಕಳಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಿದೆ. ಉದ್ಯೋಗ ಸ್ಥಳ ಮಾತ್ರವಲ್ಲದೆ ಒಟ್ಟಾರೆ ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷೆಯ ಬಗೆಗೆ ಯಾವುದೇ ಅನುಮಾನ ಕಾಡದಿರುವಂತಹ ವಾತಾವರಣ ರೂಪಿಸುವ ಕೆಲಸವಾಗಬೇಕು. ಕೇವಲ ಸರಕಾರದ ಉಪಕ್ರಮ, ಕಾನೂನುಗಳ ಜಾರಿ ಮತ್ತಿತರ ಕ್ರಮಗಳಿಂದ ಇಂತಹ ವಾತಾವರಣ ರೂಪಿಸುವುದು ಕಷ್ಟಸಾಧ್ಯವಾಗಿದ್ದು, ಇಡೀ ಸಮಾಜ ಒಗ್ಗೂಡಿ ಈ ಕಾರ್ಯದಲ್ಲಿ ಕೈಜೋಡಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.