Congress ರಾಜ್ಯಪಾಲರ ವಿರುದ್ಧ ಇಂದು ಕಾಂಗ್ರೆಸ್ ಪಕ್ಷ ಶಕ್ತಿ ಪ್ರದರ್ಶನ
ವಿಧಾನಸೌಧದಿಂದ ರಾಜಭವನದವರೆಗೆ ರಾಜಭವನ ಚಲೋ
Team Udayavani, Aug 31, 2024, 6:41 AM IST
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಹಿತ ವರ್ಷದಿಂದ ಬಾಕಿ ಉಳಿಸಿಕೊಂಡಿರುವ ವಿಪಕ್ಷ ನಾಯಕರ ಪ್ರಕರಣಗಳ ವಿರುದ್ಧವೂ ಅಭಿಯೋಜನೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಶನಿವಾರ ರಾಜಭವನ ಚಲೋ ಹಮ್ಮಿಕೊಂಡಿದೆ.
ಈ ಮೂಲಕ ರಾಜ್ಯಪಾಲರ ನಡೆಯ ವಿರುದ್ಧ ಮತ್ತೂಂದು ಹಂತದ ಹೋರಾಟಕ್ಕೆ ಸಜ್ಜಾಗಿದೆ.
ಬೆಳಗ್ಗೆ 10.30ಕ್ಕೆ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಹೊರಡಲಿರುವ ಪ್ರತಿಭಟನೆ ಮೆರ ವಣಿಗೆ ರಾಜಭವನದಲ್ಲಿ ಅಂತ್ಯಗೊಳ್ಳಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್ ಈ ಹೋರಾಟದ ನೇತೃತ್ವ ವಹಿಸಲಿದ್ದಾರೆ. ಎಲ್ಲ ಸಚಿವರು, ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.
ಸಿಎಂ ವಿರುದ್ಧ ಅಭಿಯೋಜನೆಗೆ ತ್ವರಿತಗತಿಯಲ್ಲಿ ಅನುಮತಿ ನೀಡಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಈ ಪ್ರತಿಭಟನೆಯಲ್ಲಿ ಬಣಗಳ ಭಿನ್ನರಾಗಗಳನ್ನು ಬದಿಗೊತ್ತಿ ಎಲ್ಲ ನಾಯಕರು ಭಾಗವಹಿಸುವ ಮೂಲಕ ಸಿದ್ದರಾಮಯ್ಯ ಪರ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಗಲಿದ್ದಾರೆ.
“ಬಾಕಿ ಉಳಿದ ಎಲ್ಲ ಪ್ರಕರಣಗಳ ವಿಚಾರಣೆಗೂ ಅನುಮತಿ ಕೊಡಿ, ಇಲ್ಲವಾದರೆ ಸಿಎಂ ವಿರುದ್ಧ ಅಭಿ ಯೋಜನೆಗೆ ನೀಡಿರುವ ಅನುಮತಿ ಯನ್ನು ಹಿಂಪಡೆಯಿರಿ’ ಎಂಬುದು ಪ್ರಮುಖ ಬೇಡಿಕೆ ಆಗಿರಲಿದೆ.
ರಾಜ್ಯಪಾಲರಿಂದ ಭೇಟಿಗೆ ಅನುಮತಿ: ಡಿಕೆಶಿ
ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದೆವು. ಈಗಾ ಗಲೇ ಸಮಯ ಕೊಟ್ಟಿದ್ದಾರೆ. ಶನಿವಾರ ಎಲ್ಲ ಶಾಸಕರು, ಸಂಸದರು, ಮುಂಚೂಣಿ ನಾಯಕರಿಗೆ ಸೂಚನೆ ನೀಡಲಾಗಿದ್ದು, ಎಲ್ಲರೂ ಭಾಗವಹಿಸಲಿದ್ದಾರೆ ಎಂದರು.
ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ- ಜೆಡಿಎಸ್
ಪಕ್ಷಗಳ ಸೇಡು, ಹೊಟ್ಟೆಕಿಚ್ಚಿನ ಪಿತೂರಿಯನ್ನು ಸಹಿಸಬೇಡಿ. ಜನರ ಆಶೀರ್ವಾದ ಇರುವವರೆಗೆ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ. ಮೊದಲ ಬಾರಿ ಸಿಎಂ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕಿದ್ದೇನೆ. 2ನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇನೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಮುಡಾ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರ ನಡೆ ಸರಿಯಲ್ಲ. ರಾಜ್ಯಪಾಲರ ಶೋಕಾಸ್ ನೋಟಿಸ್ ಬಗ್ಗೆ ಹೇಳಿದ್ದೇವೆ. ಆದರೂ ಯಾವುದೇ ತೀರ್ಮಾನ ಮಾಡಲಿಲ್ಲ. ಇದು ಎಷ್ಟು ಸರಿ ಎಂದು ಕೇಳುತ್ತೇವೆ. ಇದಕ್ಕೆ ಸ್ಪಂದಿಸದಿದ್ದರೆ ರಾಷ್ಟ್ರಪತಿಗಳ ಮೊರೆಹೋಗುತ್ತೇವೆ.
-ಡಾ| ಪರಮೇಶ್ವರ್, ಗೃಹಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.