Bengaluru: ಲೈಸೆನ್ಸ್‌ ಪಡೆಯಲು ಪಿಜಿಗಳಿಗೆ 15 ದಿನ ಗಡುವು

ಪರವಾನಗಿ, ಮಾರ್ಗಸೂಚಿ ಅಳವಡಿಸಿಕೊಳ್ಳದಿದ್ದರೆ ಪಾಲಿಕೆಯಿಂದ ಬೀಗ ಮುದ್ರೆ ; 25 ಸಾವಿರ ಪೈಕಿ 2 ಸಾವಿರ ಪಿಜಿಗಳಿಗೆ ಮಾತ್ರ ಲೈಸೆನ್ಸ್‌

Team Udayavani, Aug 31, 2024, 2:40 PM IST

12-bbmp

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪೇಯಿಂಗ್‌ ಗೆಸ್ಟ್‌ಗಳ (ಪಿಜಿ) ಸುರಕ್ಷತಾ ದೃಷ್ಟಿಯಿಂದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೆ.15ರ ಒಳಗೆ ಮಾರ್ಗಸೂಚಿಗಳನ್ನು ಅಳವಡಿಕೆ ಮಾಡಿಕೊಳ್ಳುವಂತೆ ಸೂಚಿಸಿದೆ. ಜತೆಗೆ ಬಿಬಿಎಂಪಿಯಿಂದ ಪರವಾನಗಿ ಪಡೆಯದ ಪಿಜಿಗಳಿಗೆ ಬೀಗ ಮುದ್ರೆ ಹಾಕುವ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 25 ಸಾವಿ ರಕ್ಕೂ ಅಧಿಕ ಪಿಜಿಗಳ ಕಾರ್ಯಾಚರಣೆ ನಡೆಸುತ್ತಿ ರುವ ಮಾಹಿತಿ ಇದೆ. ಇದುವರೆಗೂ ಕೇವಲ 2 ಸಾವಿರ ಪಿಜಿಗಳಿಗೆ ಮಾತ್ರ ಪರವಾನಗಿ ವಿತರಿಸಲಾ ಗಿದೆ. ಆದರೆ ನಗರದಲ್ಲಿ ಸಾವಿರಾರು ಪಿಜಿಗಳಿವೆ. ಹೀಗಾಗಿ, ಅನಧಿಕೃತ ಪಿಜಿಗಳನ್ನು ಪತ್ತೆ ಹಚ್ಚುವ ಕಾರ್ಯಕ್ಕೂ ಅಧಿಕಾರಿಗಳು ಮುಂದಾಗಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಅನಧಿಕೃತ ಪಿಜಿಗಳಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಯೋಜನೆ ರೂಪಿಸಿದೆ.

ಯಾವುದೇ ಪಿಜಿಗಳಾಗಿದ್ದರೂ ಸೆಪ್ಟೆಂಬರ್‌ 15ರ ಒಳಗೆ ಬಿಬಿಎಂಪಿ ರೂಪಿಸಿರುವ ಮಾರ್ಗ ಸೂಚಿಗಳನ್ನು ಅಳವಡಿಕೆ ಮಾಡಿಕೊಳ್ಳಲೇಬೇಕು. ಜತೆಗೆ ಪಿಜಿ ನಡೆಸುವ ಬಗ್ಗೆ ಪರವಾನಗಿ ಪಡೆದುಕೊಳ್ಳಲೇಬೇಕು. ಪರವಾನಗಿ ಪಡೆಯದೇ ಅನಧಿಕೃತವಾಗಿ ನಡೆಸುವ ಪೇಯಿಂಗ್‌ ಗೆಸ್ಟ್‌ಗಳನ್ನು ಬಂದ್‌ ಮಾಡುವುದಾಗಿ ಪಾಲಿಕೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಎಷ್ಟೆ ಪಿಜಿಗಳಿದ್ದರೂ ಸೆ.15ರೊಳಗೆ ಲೈಸೆನ್ಸ್‌ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ಹೆಲ್ಪ್ಲೈನ್‌ ಫ‌ಲಕ ಪ್ರದರ್ಶಿಸಬೇಕು: ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ ಪೇಯಿಂಗ್‌ ಗೆಸ್ಟ್‌ ಕಟ್ಟಡದಲ್ಲಿ ಪಾಲಿಕೆ ಸಹಾಯವಾಣಿ ಸಂಖ್ಯೆ-1533 ಮತ್ತು ಪೋಲೀಸ್‌ ಇಲಾಖೆಯ ಸಹಾಯವಾಣಿ ಸಂಖ್ಯೆ:101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಉದ್ದಿಮೆದಾರರು, ಮಾಲೀಕರು ಪೇಯಿಂಗ್‌ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಠ ಒಬ್ಬ ನೌಕರನ್ನಾದರೂ ಕಡ್ಡಾಯವಾಗಿ 24×7 ಸೇವೆಯಡಿಯಲ್ಲಿ ನಿಯೋಜಿಸಿರತಕ್ಕದ್ದು ಎಂಬುವುದು ಸೇರಿದಂತೆ ಹಲವು ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದೆ.

ಪಿಜಿಯಲ್ಲಿ ಪ್ರತಿ ನಿವಾಸಿಗೆ 70 ಚದರ ಅಡಿ ಜಾಗ ಕಡ್ಡಾಯ

 ಪೇಯಿಂಗ್‌ ಗೆಸ್ಟ್‌ಗಳಲ್ಲಿನ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿರಬೇಕು.

 ಪ್ರತಿ ಕ್ಯಾಮರಾದ ವಿಡಿಯೋ ಮತ್ತು ಫೋಟೇಜ್‌ಗಳನ್ನು 90 ದಿನಗಳವರೆಗೆ ಹಾರ್ಡ್‌ ವೇರ್‌ -ಸಾಫ್ಟ್‌ವೇರ್‌ ಬ್ಯಾಕಪ್‌ ಸ್ಟೋರೆಜ್‌ ಮಾಡಬೇಕು.

 ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪಿಜಿಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು.

 ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡಬೇಕು.

ರಾಜಧಾನಿಯ ಪಿಜಿ ಮಾಲಿಕರು ಪರವಾನಗಿ ಜತೆಗೆ ಪಾಲಿಕೆಯ ಹೊಸ ಮಾರ್ಗಸೂಚಿಗಳ ಅಳವಡಿಸಿಕೊಳ್ಳಬೇಕು. ಒಂದು ಪಿಜಿಯಿಂದ ಕೆಟ್ಟ ಹೆಸರು ಬಂದರೆ ಎಲ್ಲ ಪಿಜಿಗಳಿಗೂ ಬರುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಅನಧಿಕೃತವಾಗಿ ಪಿಜಿ ನಡೆಸಲು ಮುಂದಾದರೆ ಅಂತವರ ವಿರುದ್ಧ ಪಾಲಿಕೆ ಕ್ರಮ ಕೈಗೊಳ್ಳಲಿ. ●ಅರುಣ್‌ ಕುಮಾರ್‌, ಪಿಜಿ ಮಾಲಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

1-sulakshana

AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.