MP; ದಲಿತ ಹುಡುಗನಿಗೆ ಕಿರುಕುಳ ವಿಡಿಯೋ ವೈರಲ್: ಐವರ ವಿರುದ್ಧ ಕೇಸ್
Team Udayavani, Aug 31, 2024, 7:19 PM IST
ಭೋಪಾಲ್: ಮಧ್ಯಪ್ರದೇಶದ ಶಹದೋಲ್ನಲ್ಲಿ 17 ವರ್ಷದ ದಲಿತ ತರುಣನ ಮೇಲೆ ಹಲ್ಲೆ ನಡೆಸಿ ಅವಮಾನಕರ ಕೃತ್ಯಗಳಿಗೆ ಒತ್ತಾಯಿಸಿದ ಆರೋಪದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಐವರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳೀಯ ಭಾಷೆಯಲ್ಲಿ ‘ಮುರ್ಘಾ ಬನಾನಾ’ ಎಂದು ಕರೆಯಲ್ಪಡುವ ರೀತಿಯಲ್ಲಿ ಆತನನ್ನು ಕುಣಿಯಲು ಮತ್ತು ಅವನ ಕಿವಿಗಳನ್ನು ಹಿಡಿದಿಟ್ಟುಕೊಳ್ಳುವಂತೆ ಮಾಡಲಾಯಿತು. ಶಿಕ್ಷೆಯಾಗಿ, ಕಾಗೆಯಂತೆ ಕೂಗಲು ಬಲವಂತ ಮಾಡಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ.
ಆರೋಪಿಗಳು ಸಂತ್ರಸ್ತನ ನರಳಾಟದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ತುಣುಕುಗಳನ್ನು ನೋಡಿದ ನಂತರ, ನಾವು ದಲಿತನಾಗಿರುವ ಸಂತ್ರಸ್ತನನ್ನು ಗುರುತಿಸಿದ್ದೇವೆ. ಆತನಿಗೆ ಪರಿಚಯವಿದ್ದ ಆರೋಪಿಗಳು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಗಸ್ಟ್ 25 ರಂದು ಹಳೆ ವಿವಾದದ ಹಿನ್ನೆಲೆಯಲ್ಲಿ ಈ ರೀತಿ ನರಕಯಾತನೆ ಅನುಭವಿಸುವಂತೆ ಮಾಡಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ತಿವಾರಿ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಆರೋಪ ಹೊರಿಸಲಾಗಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.