Kasargod: ಮೀನಿಗೆ ಗಾಳ ಹಾಕಲು ಹೋಗಿದ್ದ ಯುವಕ ನಾಪತ್ತೆ
Team Udayavani, Aug 31, 2024, 9:29 PM IST
ಕಾಸರಗೋಡು: ಮೀನುಗಾರಿಕೆಗಾಗಿ ಗಾಳ ಹಾಕಲು ಹೋದ ಯುವಕ ನಾಪತ್ತೆಯಾದ ಘಟನೆ ನಡೆದಿದೆ.
ಕೀಯೂರು ಮೀನುಗಾರಿಕಾ ಬಂದರು ಪರಿಸರದಲ್ಲಿ ಮೀನುಗಾರಿಕೆಗೆ ಗಾಳ ಹಾಕಲು ಹೋಗಿದ್ದ ಚೆಮ್ನಾಡ್ ನಿವಾಸಿ ರಿಯಾಸ್(40) ನಾಪತ್ತೆಯಾಗಿದ್ದು, ಈ ಬಗ್ಗೆ ಸಂಬಂಧಿಕರು ಮೇಲ್ಪರಂಬ ಪೊಲೀಸರಿಗೆ ದೂರು ನೀಡಿದ್ದಾರೆ. ಕೋಸ್ಟಲ್ ಪೊಲೀಸ್ ಪಡೆ ಸಮುದ್ರದಲ್ಲಿ ಶೋಧ ಆರಂಭಿಸಿದೆ.
ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೋಗಿದ್ದರು. ಬ್ಯಾಗ್ ಹಾಗು ಸ್ಕೂಟರ್ ಬಂದರು ಸಮೀಪ ಪತ್ತೆಯಾಗಿದೆ. ಫೋನ್‌ನಲ್ಲಿ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಬ್ಯಾಗ್‌ನಿಂದ ಮೊಬೈಲ್ ಫೋನ್ ಹಾಗು ಗಾಳ ಹಾಕಲು ಬಳಸುವ ಉಪಕರಣಗಳು ಪತ್ತೆಯಾಗಿವೆ. ಗಾಳ ಹಾಕುತ್ತಿದ್ದಂತೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT: ಭಾರತ ವಿರುದ್ದದ ಮೊದಲ ಟೆಸ್ಟ್ ಗೆ ಆಸೀಸ್ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ
Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.