Mangaluru: ಹೆಣ್ಣು ಮಗುವಿನ ಅಪಹರಣ; ದೂರು ಬಂದ 2 ಗಂಟೆಯಲ್ಲಿ ಆರೋಪಿ ಸೆರೆ!

ಸಿಸಿ ಕ್ಯಾಮೆರಾಗಳ ಪರಿಶೀಲಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕಂಕನಾಡಿ ನಗರ ಠಾಣೆ ಪೊಲೀಸರು

Team Udayavani, Sep 1, 2024, 10:41 PM IST

Mangaluru

ಮಂಗಳೂರು: ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ಅಪಹರಿಸಿದ ಘಟನೆ ನಗರದ ಪಡೀಲ್‌ ಬಳಿ ಸಂಭವಿಸಿದ್ದು ಕಂಕನಾಡಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೂರು ಬಂದ ಎರಡು ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಕೇರಳ ಎರ್ನಾಕುಲಂ ಜಿಲ್ಲೆಯ ತಾತಾಪಿಲ್ಲಿ ನಿವಾಸಿ ಅನೀಶ್‌ ಕುಮಾರ್‌(59) ಬಂಧಿತ ಆರೋಪಿ. ಪಡೀಲ್‌ನ ಅರಣ್ಯ ಇಲಾಖೆಯ ಸಸ್ಯಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡಿದ್ದು ಅಲ್ಲಿಯೇ ಕಾರ್ಮಿಕರ ಶೆಡ್‌ನ‌ಲ್ಲಿ ವಾಸವಾಗಿದ್ದ ಹಾವೇರಿ ಜಿಲ್ಲೆ ಶಿಗ್ಗಾಂವಿ ಮೂಲದ  ಮಹಿಳೆಯ ಎರಡೂವರೆ ವರ್ಷದ ಹೆಣ್ಣು ಮಗು ಮತ್ತು ಮತ್ತೊಬ್ಬ ಕಾರ್ಮಿಕರ ಹೆಣ್ಣುಮಗು ಅಲ್ಲಿಯೇ ಪಕ್ಕದಲ್ಲಿ ಆಟವಾಡುತ್ತಿದ್ದವು.  ಸಂಜೆ 4.30ರ ವೇಳೆಗೆ ನೋಡುವಾಗ ಒಂದು ಮಗು ಕಾಣೆಯಾಗಿತ್ತು. ಹಲವೆಡೆ ಹುಡುಕಾಟ ನಡೆಸಿ ಸುಮಾರು 7.30ಕ್ಕೆ ಕಂಕನಾಡಿ ನಗರ ಠಾಣಾ ಪೊಲೀಸರಿಗೆ ದೂರು ನೀಡಿದರು.

ರೈಲ್ವೆ ನಿಲ್ದಾಣದ ಸಿಸಿ  ಕ್ಯಾಮೆರಾ ನೆರವು
ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ಆರಂಭಿಸಿ ಲಭ್ಯ ಸಿಸಿ ಕ್ಯಾಮೆರಾಗಳ ಪರಿಶೀಲಿಸಿದರು. ರೈಲ್ವೆ ನಿಲ್ದಾಣದ ಸಿಸಿ ಕ್ಯಾಮೆರಾವನ್ನು ಪರಿಶೀಲಿಸುವಾಗ ಓರ್ವ ವ್ಯಕ್ತಿ ತನ್ನೊಂದಿಗೆ ಮಗುವನ್ನು ಕರೆದೊಯ್ಯುವುದು ಕಂಡು ಬಂತು. ಕೂಡಲೇ ಕಾಸರಗೋಡು ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಅಲ್ಲಿಗೆ ತೆರಳಿದ ಮಂಗಳೂರಿನ ಪೊಲೀಸರು ಕಾಸರಗೋಡು ಪೊಲೀಸರ ಜತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮಗು ಸಹಿತವಾಗಿ ರಾತ್ರಿ 9.30ಕ್ಕೆ ವಶಕ್ಕೆ ಪಡೆದಿದ್ದಾರೆ. ಮಗು ಸುರಕ್ಷಿತವಾಗಿದ್ದು ಅದನ್ನು ಹೆತ್ತವರಿಗೆ ಒಪ್ಪಿಸಲಾಗಿದೆ. ಆರೋಪಿ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

“ಹೆಣ್ಣು ಮಗುವಿನ ಮೇಲಿನ ಆಸೆ’
ಆರೋಪಿ ಅನೀಶ್‌ ಕುಮಾರ್‌(59) ಎರ್ನಾಕುಲಂ ನಿವಾಸಿಯಾಗಿದ್ದು ಈತನನ್ನು ಪೊಲೀಸರು ವಿಚಾರಿಸಿದಾಗ “ನನಗೆ ಮೂವರು ಗಂಡು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳಿಲ್ಲ. ನಾನು ಮಗುವಿನ ಬಳಿ ಹೋದಾಗ ಅದು ನೋಡಿ ನಗಾಡಿತು. ಅದು ನನ್ನ ಹಿಂದೆ ಬಂತು. ನಾನು ಎತ್ತಿಕೊಂಡು ಬಂದೆ’ ಎಂದು ಉತ್ತರಿಸಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ಅನೀಶ್‌ ಕುಮಾರ್‌ ವಿವಿಧ ಕಡೆಗಳಿಗೆ ರೈಲಿನಲ್ಲಿ ತಿರುಗಾಡುತ್ತಿದ್ದು ಕೆಲವು ದಿನಗಳ ಹಿಂದೆ ಮುಂಬೈಗೆ ಹೋಗಿ ಬಂದಿದ್ದ. ಶನಿವಾರದಂದು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಕ್ಕೆ ಬಂದು ಇಳಿದಿದ್ದ. ಅಲ್ಲಿಂದ ನಗರದ ಕಡೆಗೆ ಬರುತ್ತಿದ್ದಾಗ ರೈಲ್ವೆ ನಿಲ್ದಾಣಕ್ಕೆ ಹತ್ತಿರವಿರುವ ಬಜಾಲ್‌ನಲ್ಲಿ ಮಗುವನ್ನು ಕಂಡು ಅದರ ಹತ್ತಿರ ಹೋಗಿದ್ದ. ಬಳಿಕ ಎತ್ತಿಕೊಂಡು ಬಂದಿದ್ದ. ಈತನ ವಿರುದ್ಧ ಈ ಹಿಂದೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿರುವ ಮಾಹಿತಿ ದೊರೆತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.