Renukaswamy Case: 2 ತಿಂಗಳ ಜೈಲುವಾಸದಲ್ಲಿ 10 ಕೆಜಿ ಕಡಿಮೆಯಾದ ನಟ ದರ್ಶನ್‌

ಪತ್ನಿ ಭೇಟಿ ಬಳಿಕ ದರ್ಶನ್‌ ಕೊಂಚ ನಿರಾಳ, ಶನಿವಾರ ರಾತ್ರಿ ನಿದ್ದೆ ಮಾಡಿದ ದರ್ಶನ್‌

Team Udayavani, Sep 2, 2024, 7:25 AM IST

Darsh-ballari

ಬಳ್ಳಾರಿ: ಕಳೆದ ಮೂರು ದಿನಗಳಿಂದ ಬಳ್ಳಾರಿ ಜೈಲಲ್ಲಿ ಸೆರೆವಾಸ ಅನುಭವಿಸುತ್ತಿರುವ ಕೊಲೆ ಆರೋಪಿ ದರ್ಶನ್‌, ಶನಿವಾರ ಪತ್ನಿ ವಿಜಯಲಕ್ಷ್ಮೀ ಭೇಟಿಯಾದ ಬಳಿಕ ಒಂದಷ್ಟು ನಿರಾಳರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಿದ್ದೆ ಇಲ್ಲದೇ ಒದ್ದಾಡಿದ್ದ ಅವರು, ಶನಿವಾರ ರಾತ್ರಿ ಸ್ವಲ್ಪ ನಿದ್ದೆ ಮಾಡಿದ್ದಾರೆಂದು ತಿಳಿದು ಬಂದಿದೆ.

ಬಳ್ಳಾರಿ ಜೈಲಿನಲ್ಲಿ ಪತಿ ದರ್ಶನ್‌ನನ್ನು ಭೇಟಿಯಾದ ಪತ್ನಿ ವಿಜಯಲಕ್ಷ್ಮೀ, ಮೈಸೂರು ಚಾಮುಂಡೇಶ್ವರೀ ದೇವಿಯ ಕುಂಕುಮ, ಅಕ್ಷತೆ ಮತ್ತು ಪ್ರಸಾದ ನೀಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಸುದೀರ್ಘ‌ವಾಗಿ ಪತಿ ದರ್ಶನ್‌ ಜತೆಗೆ ಮಾತನಾಡಿರುವ ಪತ್ನಿ ವಿಜಯಲಕ್ಷ್ಮೀ, ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ಮಾಡಿದ್ದಾರೆ. ನಾಲ್ಕನೇ ದಿನವಾದ ರವಿವಾರ ಬೆಳಗ್ಗೆ ನಿದ್ದೆಯಿಂದ ಎದ್ದು, ವಿಶೇಷ ಭದ್ರತಾ ವಿಭಾಗದ ಆವರಣದಲ್ಲೇ ವಾಕಿಂಗ್‌ ಮಾಡಿದ್ದಾರೆ. ಜೈಲು ಮೆನು ಪ್ರಕಾರ ನೀಡಿದ್ದ ಬೆಳಗಿನ ಉಪಾಹಾರ ಪಲಾವ್‌ ಸೇವಿಸಿದ್ದಾರೆ.

ದರ್ಶನ್‌ ತೂಕದಲ್ಲಿ ಇಳಿಕೆ?
ಎರಡು ತಿಂಗಳಿಂದ ಬೆಂಗಳೂರು, ಬಳ್ಳಾರಿ ಜೈಲುಗಳಲ್ಲಿ ಸೆರೆವಾಸ ಅನುಭವಿಸುತ್ತಿರುವ ದರ್ಶನ್‌, ಮಾನಸಿಕವಾಗಿ ಕುಗ್ಗಿರುವುದು ಮಾತ್ರವಲ್ಲದೇ, ದೇಹದ ತೂಕವನ್ನು ಸಹ ಕಳೆದುಕೊಂಡಿದ್ದಾರೆ. ಮೂಲಗಳ ಪ್ರಕಾರ ದರ್ಶನ್‌, ಕಳೆದ ಎರಡು ತಿಂಗಳಿಂದ ಜೈಲಿನಲ್ಲಿರುವುದರಿಂದ ಮಾನಸಿಕವಾಗಿ ಕುಗ್ಗಿ ಒಂದಷ್ಟು ತೂಕ ಕಡಿಮೆಯಾಗಿರಬಹುದು.

ಮೇಲಾಗಿ ಬೆನ್ನು ನೋವಿನ ಸಮಸ್ಯೆಯಿಂದ ಇಂಡಿಯನ್‌ ಟಾಯ್ಲೆಟ್‌ ಬದಲಿಗೆ ವೆಸ್ಟರ್ನ್ ಕೇಳಿದ್ದಾರೆ. ಟಾಯ್ಲೆಟ್‌ಗೆ ಹೋಗಬೇಕಾಗುತ್ತದೆ ಎಂದು ಊಟವನ್ನೂ ಕಡಿಮೆ ಮಾಡುತ್ತಿರುವುದಾಗಿ ಬೆಳಗಾವಿ ಉತ್ತರ ವಲಯ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಬಳಿ ಹೇಳಿಕೊಂಡಿದ್ದಾರೆ. ಹಾಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸೇರುವ ಮುನ್ನ 117 ಕೆ.ಜಿ. ತೂಕ ಇದ್ದ ದರ್ಶನ್‌, ಇದೀಗ 10 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸರ್ಜಿಕಲ್‌ ಚೇರ್‌: ಇಂದು ವೈದ್ಯರಿಂದ ತಪಾಸಣೆೆ
ಬಳ್ಳಾರಿ: ಬೆನ್ನು ನೋವಿನ ಸಮಸ್ಯೆಯಿಂದಾಗಿ ಸರ್ಜಿಕಲ್‌ ಚೇರ್‌ ಕೇಳಿದ್ದ ನಟ ದರ್ಶನ್‌, ಜೈಲು ಅಧಿಕಾರಿಗಳ ಸೂಚನೆಯಂತೆ ಮೆಡಿಕಲ್‌ ರಿಪೋರ್ಟ್‌ ನೀಡಿದ್ದಾರೆ. ಇದರಿಂದ ಜೈಲು ಅಧಿಕಾರಿಗಳು ದರ್ಶನ್‌ ಅವರ ವೈದ್ಯಕೀಯ ಪರೀಕ್ಷೆಗೆ ಮುಂದಾಗಿದ್ದಾರೆ.

ಬೆನ್ನು ನೋವಿನಿಂದಾಗಿ ಇಂಡಿಯನ್‌ ಟಾಯ್ಲೆಟ್‌ ಸಮಸ್ಯೆಯಾಗುತ್ತಿದೆ ಎಂದಿದ್ದ ದರ್ಶನ್‌, ಸರ್ಜಿಕಲ್‌ ಚೇರ್‌ ನೀಡುವಂತೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಜೈಲು ಅಧಿಕಾರಿಗಳು ಮೆಡಿಕಲ್‌ ರಿಪೋರ್ಟ್‌ ನೀಡುವಂತೆ ಸೂಚಿಸಿದ್ದು, ಅದರಂತೆ ದರ್ಶನ್‌ ಕುಟುಂಬಸ್ಥರು ಮೆಡಿಕಲ್‌ ರಿಪೋರ್ಟ್‌ ಅನ್ನು ಸಲ್ಲಿಸಿದ್ದಾರೆ.

ಜೈಲಿನ ವೈದ್ಯರು, ದರ್ಶನ್‌ ವೈದ್ಯಕೀಯ ವರದಿ ಪರಿಶೀಲಿಸುತ್ತಿದ್ದು, ಅನಿವಾರ್ಯವೆನಿಸಿದಲ್ಲಿ ನೀಡುವ ಸಾಧ್ಯತೆಯಿದೆ. ಅಲ್ಲದೇ, ಸದ್ಯ ವರದಿಯನ್ನು ಪರಿಶೀಲಿಸಿರುವ ಜೈಲಿನ ವೈದ್ಯರು, ದರ್ಶನ್‌ನನ್ನು ತಪಾಸಣೆ ಮಾಡಿಲ್ಲ. ಸೋಮವಾರ ಮಾಡುವ ಸಾಧ್ಯತೆಯಿದೆ. ಜೈಲಿನಲ್ಲಿ ಸಾಮಾನ್ಯ ಕೈದಿಯಂತೆ ದರ್ಶನ್‌ನನ್ನು ಸಹ ನೋಡಿಕೊಳ್ಳಲಾಗುತ್ತಿದ್ದು, ಕೆಲವೊಂದು ಮಾತ್ರೆಗಳನ್ನು ನೀಡಲು ಮನವಿ ಮಾಡಿಕೊಂಡಿದ್ದು, ಸರಕಾರಿ ಮಾತ್ರೆಗಳನ್ನು ಮಾತ್ರ ಬಳಸುವಂತೆ ಜೈಲು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ಸ್ಥಳಾಂತರ?
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಅನುಭವಿಸುತ್ತಿದ್ದ ಕೊಲೆ ಆರೋಪಿ ದರ್ಶನ್‌ಗೆ ಬಳ್ಳಾರಿ ಜೈಲಿನ ಸೆರೆವಾಸ ನರಕ ದರ್ಶನವಾಗುತ್ತಿದ್ದು, ವಾಪಸ್‌ ಬೆಂಗಳೂರಿಗೆ ಸ್ಥಳಾಂತರವಾಗಲು ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗಿರುವ ದರ್ಶನ್‌ಗೆ ಇಲ್ಲಿನ ವಿಶೇಷ ಭದ್ರತಾ ವಿಭಾಗದ 10/10 ಅಡಿ ಸೆಲ್‌ನಲ್ಲಿ ಅಕ್ಷರಶಃ ಜೈಲಿನ ನಿಜ ದರ್ಶನವಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇದ್ದಂತೆ ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಆರಾಮವಾಗಿ ಇರಲು ಆಗುತ್ತಿಲ್ಲ. ಸೊಳ್ಳೆಗಳ ಕಾಟಕ್ಕೆ ನಿದ್ದೆ ಬರುತ್ತಿಲ್ಲ. ಬೆನ್ನು ನೋವಿನಿಂದ ಇಂಡಿಯನ್‌ ಟಾಯ್ಲೆಟ್‌ ಸಮಸ್ಯೆಯಿಂದಾಗಿ ಸರಿಯಾಗಿ ಊಟ ಮಾಡಲಾಗುತ್ತಿಲ್ಲ. ಇದರಿಂದ ನರಕಯಾತನೆ ಅನುಭವಿಸುತ್ತಿದ್ದಾರೆ.

ಜೈಲಿನಲ್ಲಿ ಶನಿವಾರ ಭೇಟಿಯಾದ ಪತ್ನಿ ವಿಜಯಲಕ್ಷ್ಮೀ ಮತ್ತವರ ಸಂಬಂ ಧಿಕರ ಬಳಿ ಬಳ್ಳಾರಿ ಜೈಲಿನಲ್ಲಿ ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ಹೇಳಿಕೊಂಡಿರುವ ಆರೋಪಿ ದರ್ಶನ್‌, ಬೆನ್ನು ನೋವು, ಕೈ ನೋವು, ಇಂಡಿಯನ್‌ ಟಾಯ್ಲೆಟ್‌ನಲ್ಲಿ ವ್ಯವಸ್ಥೆ ಸರಿಯಾಗುತ್ತಿಲ್ಲ. ಹೀಗಾಗಿ ಆರೋಗ್ಯದ ನೆಪವೊಡ್ಡಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಮತ್ತೆ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲು ಸದ್ದಿಲ್ಲದೇ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದರ್ಶನ್‌ ಸ್ಥಳಾಂತರಕ್ಕೂ ನನಗೂ ಸಂಬಂಧವಿಲ್ಲ: ಸಚಿವ ಜಮೀರ್‌
ಹುಬ್ಬಳ್ಳಿ: ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗುವುದಕ್ಕೂ ನನಗೂ ಸಂಬಂಧವಿಲ್ಲ. ಆತ ನನ್ನ ಸ್ನೇಹಿತ ಇರಬಹುದು. ನಾನು ಬಳ್ಳಾರಿ ಉಸ್ತುವಾರಿ ಸಚಿವ ಇರಬಹುದು. ಆದರೆ ನಾನು ಡಿಜಿ ಅಲ್ಲ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಜೈಲಿನಲ್ಲಿನ ರಾಜಾತಿಥ್ಯದ ಫೋಟೋ ಮಾಧ್ಯಮದಲ್ಲೇ ಬಂದಿದೆ. ಈ ಹಿನ್ನೆಲೆಯಲ್ಲಿ ಬೇರೆ ಜೈಲಿಗೆ ದರ್ಶನ್‌ನನ್ನು ವರ್ಗಾಯಿಸಲಾಗಿದೆ. ಇದನ್ನು ಪೊಲೀಸ್‌ ಇಲಾಖೆ ತೀರ್ಮಾನ ಮಾಡಿದ್ದು ಹೊರತು ನಾನಲ್ಲ ಎಂದರು.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.