![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 2, 2024, 6:30 AM IST
ಬೆಳಗಾವಿ: ಕಾರವಾರ ಜೈಲಿನಲ್ಲಿ ತಂಬಾಕು ಸಿಗುತ್ತಿಲ್ಲ ಎಂದು ಆಕ್ರೋಶಗೊಂಡು ಕೈದಿಗಳಿಬ್ಬರು ರಂಪಾಟ ಮಾಡಿ ಕಲ್ಲಿನಿಂದ ತಲೆಗೆ ಜಜ್ಜಿಕೊಂಡ ಘಟನೆ ಮಾಸುವ ಮುನ್ನವೇ, ಹಿಂಡಲಗಾ ಕೇಂದ್ರ ಕಾರಾಗೃಹದಲ್ಲೂ ತಂಬಾಕು, ಪಾನ್ ಬೀಡಾ, ಗುಟ್ಕಾ ನೀಡುವಂತೆ ಆಗ್ರಹಿಸಿ ಜೈಲಿನ ಕೈದಿಗಳು ಹಾಗೂ ವಿಚಾರಣಾಧೀನ ಕೈದಿಗಳು ರವಿವಾರ ಬೆಳಗಿನ ಉಪಾಹಾರ ತ್ಯಜಿಸಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದರಿಂದ ವಿವಾದಕ್ಕೀಡಾದ ಬಂಧಿಖಾನೆ ಇಲಾಖೆ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲೂ ಕಠಿನ ನಿಯಮ ಜಾರಿ ಮಾಡಿದೆ. ಜೈಲಿನಲ್ಲಿ ಪೂರೈಕೆ ಆಗುತ್ತಿದ್ದ ಗುಟ್ಕಾ, ತಂಬಾಕು, ಪಾನ್ ಬೀಡಾ ನಿಷೇ ಧಿಸಿದ್ದರಿಂದ ತಮಗೆ ಊಟ, ಉಪಾಹಾರ ಬೇಡ. ಆದರೆ ಕಡ್ಡಾಯವಾಗಿ ತಂಬಾಕು, ಪಾನ್ ಬೀಡಾ ನೀಡುವಂತೆ ಆಗ್ರಹಿಸಿದ್ದಾರೆ.
ತಂಬಾಕು, ಪಾನ್ ಬೀಡಾ ಇಲ್ಲದಿದ್ದರೆ ನಾವು ಬದುಕುವುದು ಕಷ್ಟ. ಊಟ, ಉಪಾಹಾರ ಬಿಡುತ್ತೇವೆ, ಹೊರತು ಪಾನ್ ಬೀಡಾ, ತಂಬಾಕು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಜೈಲಿನಲ್ಲಿ ಪಾನ್ ಬೀಡಾ, ತಂಬಾಕು ಒದಗಿಸದಿದ್ದರೆ ಜೈಲಿನ ಹೊರಗೂ ಅವುಗಳನ್ನು ನಿಷೇಧಿಸಬೇಕು.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ಇಂಥ ಕ್ರಮ ಕೈಗೊಳ್ಳಲಾಗಿದೆ. ಅದೇ ಕ್ರಮವನ್ನು ರಾಜ್ಯದಲ್ಲೂ ಅನುಸರಿಸಬೇಕು. ನಮ್ಮ ಬೇಡಿಕೆ ಈಡೇರಿಸದಿದ್ದರೆ ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನೂ ತ್ಯಜಿಸುತ್ತೇವೆ ಎಂದು ಕೈದಿಗಳು ಎಚ್ಚರಿಕೆ ನೀಡಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.