Rains Continue; ಆಂಧ್ರ, ತೆಲಂಗಾಣಕ್ಕೆ ವಾಯುಭಾರ ಹೊಡೆತ
ತೆಲಂಗಾಣದಲ್ಲಿ 3 ಸಾವು, 99 ರೈಲುಗಳ ಸಂಚಾರ ರದ್ದು, ಆಂಧ್ರಪ್ರದೇಶದಲ್ಲಿ 294 ಗ್ರಾಮಗಳಿಂದ 13,227 ಮಂದಿ ಸ್ಥಳಾಂತರ
Team Udayavani, Sep 2, 2024, 1:12 AM IST
ಹೈದರಾಬಾದ್: ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಳೆ ಸಂಬಂಧಿ ಅವಘಡಕ್ಕೆ ತೆಲಂಗಾಣದಲ್ಲಿ 3 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಹಳ್ಳಿಗಳು ಭಾಗಶಃ ಮುಳುಗಡೆಯಾಗಿವೆ. ಆಂಧ್ರಪ್ರದೇಶದಲ್ಲಿ 13,227 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ತೆಲಂಗಾಣದ ಎಲದಲ ಜಿಲ್ಲೆಗಳಿಗೂ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
99 ರೈಲು ರದ್ದು: ಭಾರೀ ಮಳೆಯಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ತೆಲಂಗಾಣದಲ್ಲಿ 99ಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ. 4 ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದ್ದು, 54 ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತೆಲಂಗಾಣದಲ್ಲಿ ಸೋಮವಾರ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
13,227 ಮಂದಿ ಸ್ಥಳಾಂತರ: ಆಂಧ್ರಪ್ರದೇಶದಲ್ಲಿ 294 ಗ್ರಾಮಗಳಿಂದ ಸುಮಾರು 13,227 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಆಂಧ್ರಪ್ರದೇಶದಲ್ಲಿ 100 ಪರಿಹಾರ ಕ್ಯಾಂಪ್‌ಗ್ಳನ್ನು ತೆರೆಯಲಾಗಿದ್ದು, 17 ಎನ್‌ಡಿಆರ್‌ಎಫ್ ಮತ್ತು ಎಸ್‌ಎಇಆರ್‌ಎಫ್ ತಂಡಗಳನ್ನು ರಕ್ಷಣೆಗೆ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ 62,644 ಹೆಕ್ಟೇರ್ ಪ್ರದೇಶ ಮುಳುಗಡೆಯಾಗಿದ್ದು, 7,218 ಹೆಕ್ಟೇರ್ ಭಾಗಶಃ ಮುಳುಗಡೆಯಾಗಿದೆ.
ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ತುರ್ತು ಸಮಯದಲ್ಲಿ ತತ್‌ಕ್ಷಣವೇ ಸ್ಪಂದಿಸುವಂತೆ ಸೂಚಿಸಿದ್ದಾರೆ.
110 ಹಳ್ಳಿಗಳ ಮುಳುಗಡೆ
ತೆಲಂಗಾಣದಲ್ಲಿ ಭಾರೀ ಮಳೆಯ ಕಾರಣದಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 110 ಹಳ್ಳಿಗಳು ಭಾಗಶಃ ಮುಳುಗಡೆಯಾಗಿವೆ. ಈ ಹಳ್ಳಿಗಳಲ್ಲಿ 100ಕ್ಕೂ ಹೆಚ್ಚು ಮಂದಿ ಮನೆಗಳ ಛಾವಣಿಗಳ ಮೇಲೆ ಕುಳಿತು ರಕ್ಷಣೆಗಾಗಿ ಕಾಯುತ್ತಿದ್ದಾರೆ. ಪ್ರವಾಹದಲ್ಲಿ ಕೊಚ್ಚಿ ಹೋಗಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. 3 ಮಂದಿ ಕೊಚ್ಚಿಹೋಗಿ ರುವ ಶಂಕೆ ವ್ಯಕ್ತಪಡಿಸಲಾಗಿದೆ.
ಈ ತಿಂಗಳು ಪ್ರತೀ ವಾರ ವಾಯುಭಾರ ಕುಸಿತ?
ಆಗಸ್ಟ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದಂತೆಯೇ ಸೆಪ್ಟಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅದರಲ್ಲೂ ವಿಶೇಷವೆಂದರೆ, ಪ್ರಸಕ್ತ ತಿಂಗಳು ಪ್ರತಿ ವಾರವೂ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಸೆಪ್ಟಂಬರ್‌ನಲ್ಲಿ ಮಳೆಯು ದೀರ್ಘಾವಧಿ ಸರಾಸರಿಗಿಂತಲೂ ಶೇ.109ರಷ್ಟು ಹೆಚ್ಚಿರಲಿದೆ. ಸಾಮಾನ್ಯವಾಗಿ ಸೆಪ್ಟಂಬರಲ್ಲಿ 168 ಮಿ.ಮೀ. ಮಳೆಯಾಗುತ್ತದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ರಾಜಸ್ಥಾನ ಹಾಗೂ ಪಂಜಾಬ್‌ನ ಹಲವೆಡೆ ಭಾರೀ ಮಳೆಯಾಗಲಿದೆ. ಪರಿಣಾಮವಾಗಿ ಭೂಕುಸಿತ, ಪ್ರವಾಹದ ಭೀತಿ ಇದ್ದು, ಈ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ. ಅರಬಿ ಸಮುದ್ರ ಹಾಗೂ ಬಂಗಾಲ ಕೊಲ್ಲಿಗಳಲ್ಲಿ ಮುಂದಿನ ವಾರಗಳಲ್ಲಿ 2 ಚಂಡಮಾರುತಗಳು ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.