Kerala ಚಿತ್ರರಂಗದ ಬಳಿಕ ಕಾಂಗ್ರೆಸ್ಸಲ್ಲಿ ಮೀ ಟೂ ಕಿಡಿ?
Team Udayavani, Sep 2, 2024, 6:55 AM IST
ತಿರುವನಂತಪುರಂ: ಕೇರಳ ಕಾಂಗ್ರೆಸ್ ಘಟಕದಲ್ಲೂ ಮಿ ಟೂ ಬಿರುಗಾಳಿ ಸೃಷ್ಟಿಯಾಗಿದೆ. ಪಕ್ಷದ ನಾಯಕರೊಂದಿಗೆ ಯಾರು ಚೆನ್ನಾಗಿರುತ್ತಾರೋ ಅಂಥವ ರಿಗೆ ಮಾತ್ರ ಉನ್ನತ ಸ್ಥಾನ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸಿಮಿ ರೋಸ್ಬೆಲ್ಲಾ ಜಾನ್ ಆರೋಪಿಸಿದ್ದಾರೆ. ಅಲ್ಲದೇ, ಕಾಂಗ್ರೆಸ್ “ಕಾಸ್ಟಿಂಗ್ ಕೌಚ್’ (ಅವಕಾಶಕ್ಕಾಗಿ ಲೈಂಗಿಕ ದುರ್ಬಳಕೆ) ಅನುಸರಿಸುತ್ತಿದೆ ಎಂದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಕೆಪಿಸಿಸಿಯಲ್ಲಿ ಇದೇ ರೀತಿ ಸಾಕಷ್ಟು ಮಹಿಳೆಯರಿಗೆ ಅನ್ಯಾಯವಾಗಿದೆ. ಅದಕ್ಕೆ ದಾಖಲೆ, ಸಾಕ್ಷಿಯೂ ನನ್ನ ಬಳಿ ಇದೆ. ಸೂಕ್ತ ಸಮಯದಲ್ಲಿ ಬಿಡುಗಡೆಗೊಳಿಸುತ್ತೇನೆ’ ಎಂದು ಹೇಳಿದ್ದಾರೆ.
ಪಕ್ಷದಿಂದ ಉಚ್ಚಾಟನೆ
ಕಾಂಗ್ರೆಸ್ ಬಗ್ಗೆ ಸಿಮಿ ಆರೋಪ ಬೆನ್ನಲ್ಲೇ ಪಕ್ಷದಿಂದ ಅವರನ್ನು ಉಚ್ಚಾಟಿಸಲಾಗಿದೆ. ಪಕ್ಷದ ಲಕ್ಷಾಂತರ ಮಹಿಳಾ ಕಾರ್ಯಕರ್ತರ ಮನೋಬಲ ಕುಗ್ಗಿಸಲು, ಅವರ ಘನತೆಗೆ ಧಕ್ಕೆ ತರಲು ವಿರೋಧಿಗಳ ಕುಮ್ಮಕ್ಕಿನೊಂದಿಗೆ ಸಿಮಿ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಜರಗಿಸಲಾಗಿದೆ ಎಂದು ಕೆಪಿಸಿಸಿ ತಿಳಿಸಿದೆ. ಕಾಂಗ್ರೆಸ್ ಮಹಿಳಾ ಘಟಕವೂ ಸಿಮಿ ವಿರುದ್ಧ ದೂರು ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.