Mollywood ನ್ಯಾ| ಹೇಮಾ ಸಮಿತಿ ವರದಿ ಬಿಡುಗಡೆ ತಡವೇಕೆ?: ನಡ್ಡಾ
ಎಲ್ಡಿಎಫ್, ಯುಡಿಎಫ್ ನಿಂದ ರಾಜ್ಯ ಹಾಳು
Team Udayavani, Sep 2, 2024, 6:00 AM IST
ಪಾಲಕ್ಕಾಡ್: ಕೇರಳದಲ್ಲಿ ಮಿ ಟೂ ಆರೋಪಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಹೇಮಾ ಸಮಿತಿ ವರದಿ ಬಿಡುಗಡೆಗೆ ರಾಜ್ಯ ಸರಕಾರ ವಿಳಂಬ ಮಾಡುತ್ತಿರುವುದೇಕೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನಿಸಿದ್ದಾರೆ.
ಇಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀವು (ರಾಜ್ಯ ಸರಕಾರ) ಯಾಕೆ ಹೇಮಾ ಸಮಿತಿ ವರದಿ ಬಿಡುಗಡೆ ಮಾಡುತ್ತಿಲ್ಲ. ಬಿಡುಗಡೆ ಮಾಡದಂತೆ ನಿಮ್ಮನ್ನು ತಡೆಯುತ್ತಿರುವುದೇನು?, ನೀವು ಇದರ ಭಾಗವಾಗಿರುವ ಕಾರಣದಿಂದಲೇ ಬಿಡುಗಡೆಗೆ ಹಿಂಜರಿಯುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಎಲ್ಡಿಎಫ್, ಯುಡಿಎಫ್ ಪಕ್ಷಗಳು ರಾಜ್ಯವನ್ನು ಹಾಳು ಮಾಡುತ್ತಿವೆ. ಇವೆರಡು ಒಂದೇ ನಾಣ್ಯದ 2 ಮುಖಗಳು ಎಂದಿದ್ದಾರೆ.
ನಡ್ಡಾ-ಭಾಗವತ್ ಭೇಟಿ: ಕುತೂಹಲ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿದ್ದಾರೆ. ಇಬ್ಬರು ನಾಯಕರು ಸುಮಾರು 30 ನಿಮಿಷ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಆರ್ಎಸ್ಎಸ್ನ ಅಗತ್ಯವಿಲ್ಲ ಎಂದು ನಡ್ಡಾ ಹೇಳಿದ ಬಳಿಕ ಮೊದಲ ಭೇಟಿ ಇದಾಗಿದೆ. ಉಭಯ ನಾಯಕರು ರಾಷ್ಟ್ರೀಯ ಹಿತಾಸಕ್ತಿ ವಿಷಯಗಳ ಬಗ್ಗೆ ಚರ್ಚಿಸಿರಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.