Caste-census; ಜಾತಿ ಗಣತಿಗೆ ಬೆಂಬಲವಿದೆ, ಆದರೆ ಚುನಾವಣೆ ಉದ್ದೇಶಕ್ಕೆ ಬಳಸಬಾರದು: RSS
Team Udayavani, Sep 2, 2024, 3:40 PM IST
ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ಸೋಮವಾರ (ಆ.02) ಜಾತಿ ಗಣತಿಗೆ (Caste Census) ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ. ಜಾತಿ ಗಣತಿಯು ಜನರ ಕಲ್ಯಾಣ ಅಗತ್ಯಗಳನ್ನು ಪರಿಹರಿಸಲು ಉಪಯುಕ್ತವಾಗಿದೆ ಎಂದು ಹೇಳಿದೆ. ಆದರೆ ಅದನ್ನು ಚುನಾವಣಾ ಉದ್ದೇಶಗಳಿಗಾಗಿ ಬಳಸಬಾರದು ಎಂದೂ ಸೂಚಿಸಿದೆ.
ಈ ಬಗ್ಗೆ ಮಾತನಾಡಿರುವ ಆರ್‌ಎಸ್ಎಸ್ ಮುಖ್ಯ ವಕ್ತಾರ ಸುನಿಲ್ ಅಂಬೆಕರ್, ದತ್ತಾಂಶಗಳ ಸಂಗ್ರಹಣೆಗೆ ಸರ್ಕಾರವು ಜಾತಿ ಗಣತಿ ಮಾಡಬೇಕು. ಜಾತಿ ಪ್ರತಿಕ್ರಿಯೆಗಳು ನಮ್ಮ ಸಮಾಜದಲ್ಲಿ ಸೂಕ್ಷ್ಮ ವಿಷಯವಾಗಿದೆ ಮತ್ತು ರಾಷ್ಟ್ರೀಯ ಏಕೀಕರಣಕ್ಕೆ ಅವು ಮುಖ್ಯವಾಗಿವೆ. ಆದರೆ, ಜಾತಿ ಗಣತಿಯನ್ನು ಚುನಾವಣಾ ಪ್ರಚಾರ ಮತ್ತು ಚುನಾವಣಾ ಉದ್ದೇಶಗಳಿಗಾಗಿ ಬಳಸಬಾರದು ಎಂದಿದ್ದಾರೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಆರ್‌ಎಸ್‌ಎಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿ, ಜಾತಿ ಗಣತಿಗೆ ತಾನು ವಿರೋಧವಿಲ್ಲ ಎಂದು ಪ್ರತಿಪಾದಿಸಿತ್ತು.
“ಇತ್ತೀಚೆಗೆ ಜಾತಿ ಗಣತಿಗೆ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗಿದೆ. ಇದನ್ನು ಸಮಾಜದ ಸರ್ವತೋಮುಖ ಪ್ರಗತಿಗೆ ಬಳಸಬೇಕು ಎಂದು ನಾವು ನಂಬುತ್ತೇವೆ. ಹಾಗೆ ಮಾಡುವಾಗ ಎಲ್ಲಾ ಕಡೆಯವರು ಸಾಮಾಜಿಕ ಸಾಮರಸ್ಯ ಮತ್ತು ಸಮಗ್ರತೆಗೆ ಭಂಗ ಬರದಂತೆ ನೋಡಿಕೊಳ್ಳಬೇಕು ಎಂದು ಸುನಿಲ್ ಅಂಬೆಕರ್ ಹೇಳಿದರು.
ಜಾತಿ ಗಣತಿಯು ಒಂದು ನಿರರ್ಥಕ ಕೆಲಸ ಎಂದು ವಿದರ್ಭ ಶಾಖೆಯ ಶ್ರೀಧರ್ ಗಾಡ್ಗೆ ಅವರು ಹೇಳಿದ ಬಳಿಕ ಆರ್ ಎಸ್ ಎಸ್ ಕಡೆಯಿಂದ ಈ ಸ್ಪಷ್ಟನೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.