![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 2, 2024, 8:37 PM IST
ಬೆಂಗಳೂರು: ಕೆಪಿಎಸ್‌ಸಿ(KPSC) ಗೆಜೆಟೆಡ್ ಪ್ರೊಬೆಷನರಿ (Gazetted Probationers) ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ತಿಳಿದ ಕೂಡಲೇ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಕಾರಣಕ್ಕೆ ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದಾರೆ.
ಆ. 27 ರಂದು ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ 350 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ತರ್ಜುಮೆ ದೋಷ ಕಂಡು ಬಂದಿದ್ದವು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಪಿಎಸ್‌ಸಿ ವಿರುದ್ಧ ಆಕ್ರೋಶ ವ್ಯಕ್ತವಾಗಿ ಪ್ರತಿಭಟನೆ, ಮರು ಪರೀಕ್ಷೆ ನಡೆಸಬೇಕೆಂಬ ಕೂಗು ಜೋರಾಯಿತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ “ಎಕ್ಸ್” ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗುವಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳ ಕೈಗೊಳ್ಳಲು ಸೂಚನೆ ನೀಡಲಾಗಿದೆ. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ಧಾರೆ.
In the light of reports of inappropriate kannada translation of questions in the KPSC Gazetted Probationers’ examination, I have directed KPSC to reconduct of the examination within 2 months to ensure fairness to all candidates
Those responsible for these lapses have been…
— Siddaramaiah (@siddaramaiah) September 2, 2024
ಇದನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೆಪಿಎಸ್ಇಯಿಂದ ವರದಿಯ ಕೇಳಿದೆ. ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರಷೋತ್ತಮ ಬಿಳಿಮಲೆ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಉದ್ಯೋಗ ಸಿಗುವುದು ಬಹಳ ಕಷ್ಟ ಇದೆ. ಈ ಮಧ್ಯೆ ಕೆಪಿಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಪ್ಪು ಮತ್ತಷ್ಟು ನೋವು ತಂದಿದೆ. ನಾವು ಈಗಾಗಲೇ ಕೆಪಿಎಸ್‌ಸಿಗೆ ಪತ್ರ ಬರೆದಿದ್ದು, ಉತ್ತರವೂ ಬಂದಿದೆ ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.