Kasaragod: ಮಕ್ಕಳ ಅಶ್ಲೀಲ ವೀಡಿಯೋ ವೀಕ್ಷಿಸುತ್ತಿದ್ದ ಆರು ಮಂದಿ ಪೊಲೀಸ್ ಬಲೆಗೆ
Team Udayavani, Sep 2, 2024, 8:37 PM IST
ಕಾಸರಗೋಡು: ಅಪ್ರಾಪ್ತ ಮಕ್ಕಳ ಅಶ್ಲೀಲ ವೀಡಿಯೋಗಳನ್ನು ವೀಕ್ಷಿಸುವವರ ವಿರುದ್ಧವಾಗಿ ಜಿಲ್ಲೆಯಲ್ಲಿ ಆರಂಭಿಸಿರುವ ಆಪರೇಶನ್ ಹಂಟ್ ಕಾರ್ಯಾಚರಣೆಯಲ್ಲಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ನಿರ್ದೇಶ ಪ್ರಕಾರ ಜಿಲ್ಲೆಯಲ್ಲಿ ಯುವಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕುಂಬಳೆ, ವಿದ್ಯಾನಗರ, ಬದಿಯಡ್ಕ, ರಾಜಪುರಂ ಪೊಲೀಸ್ ಠಾಣೆಗಳಲ್ಲಿ ತಲಾ ಒಂದರಂತೆ ಪ್ರಕರಣ ಹಾಗು ಕಾಂಞಂಗಾಡ್ನಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ. ಅಶ್ಲೀಲ ವೀಡಿಯೋ ವೀಕ್ಷಿಸಲು ಬಳಸಿದ ಆರು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿದ್ದಾರೆ.
ಮಕ್ಕಳ ಹಕ್ಕು ಸಂರಕ್ಷಣೆಯಂಗವಾಗಿ ಕೇಂದ್ರ ಗೃಹ ಸಚಿವಾಲಯದ ನಿರ್ದೇಶ ಪ್ರಕಾರ ಆಪರೇಶನ್ ಪಿ.ಹಂಟ್ ಕಾರ್ಯಾಚರಣೆ ಆರಂಭಿಸಲಾಗಿದೆ. ಅಪರಾಧಿಗಳೆಂದು ಪತ್ತೆಯಾದಲ್ಲಿ ಜಾಮೀನು ರಹಿತ ಕಾಯ್ದೆಗಳ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.