SI, VAO Exam: ತುಂಬು ತೋಳಿನ ಶರ್ಟ್, ಹೈಹೀಲ್ಡ್ ಚಪ್ಪಲಿ ಹಾಕುವಂತಿಲ್ಲ
Team Udayavani, Sep 3, 2024, 6:50 AM IST
ಬೆಂಗಳೂರು: ಸೆಪ್ಟಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸೆ. 29ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಯ ವಸ್ತ್ರ ಸಂಹಿತೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಅಭ್ಯರ್ಥಿಗಳು ಪೂರ್ಣ ತೋಳಿನ ಬಟ್ಟೆ ಮತ್ತು ಶೂ ಧರಿಸುವುದನ್ನು ನಿಷೇಧಿಸಲಾಗಿದೆ. ಪುರುಷ ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡಬೇಕು, ಪ್ಯಾಂಟ್ (ಜೇಬುಗಳಿಲ್ಲದಿರುವ ಅಥವಾ ಕಡಿಮೆ ಜೇಬಿರುವ) ಧರಿಸಬೇಕು. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಕೆಇಎ ಹೇಳಿದೆ.
ಮಹಿಳೆಯರಿಗೆ ಕಾಲುಂಗುರ ಮತ್ತು ಮಂಗಳಸೂತ್ರ ಧರಿಸಲು ಅವಕಾಶವಿದೆ. ಇದು ಬಿಟ್ಟ ರೆ ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಹೈಹೀ ಲ್ಡ್ ಶೂ/ಚಪ್ಪಲಿ ಮತ್ತು ದಪ್ಪ ಅಡಿ ಭಾಗದ ಶೂ, ಚಪ್ಪಲಿಗಳನ್ನು ಧರಿಸಬಾರದು. ಲೋಹದ ಅಭರಣ, ಕಿವಿಯೋಲೆ, ಉಂಗುರ ಮತ್ತು ಕಡಗ ಧರಿಸುವಂತಿಲ್ಲ. ಅಭ್ಯರ್ಥಿಗಳು ಪ್ರವೇಶ ಪತ್ರ ಮತ್ತು ಸರಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ತರುವುದು ಕಡ್ಡಾಯ ಎಂದು ಕೆಇಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.