Shaligram: ವಿ.ಎ.ಒ. ಕಚೇರಿ ಹಳೇ ಕಟ್ಟಡಕ್ಕೆ ಬೇಕಿದೆ ಮುಕ್ತಿ

ಮಳೆ ಬಂದರೆ ಸೋರುವ ಹೆಂಚಿನ ಮಾಡು | ಕಡತಗಳನ್ನು ಒದ್ದೆಯಾಗದಂತೆ ಕಾಪಿಡುವುದೇ ಮಹತ್ತರ ಜವಾಬ್ದಾರಿ

Team Udayavani, Sep 3, 2024, 5:04 PM IST

Shaligram: ವಿ.ಎ.ಒ. ಕಚೇರಿ ಹಳೇ ಕಟ್ಟಡಕ್ಕೆ ಬೇಕಿದೆ ಮುಕ್ತಿ

ಕೋಟ: ಯಾರದ್ದೇ ಮನೆ ಬಿದ್ದರೂ, ಆಸ್ತಿ-ಪಾಸ್ತಿಗಳಿಗೆ ಹಾನಿಯಾದರೂ ಪರಿಹಾರ ನೀಡುವುದು ಗ್ರಾಮ ಆಡಳಿತಾಧಿಕಾರಿಗಳ ಕೆಲಸವಾಗಿರುತ್ತದೆ. ಆದರೆ ದೀಪದ ಕೆಳಗೆ ಕತ್ತಲೆ ಎನ್ನುವಂತೆ ಇವರಿಗೆ ಆಡಳಿತ ನಡೆಸಲು ಸರಿಯಾದ ಸೂರಿಲ್ಲದ ಪರಿಸ್ಥಿತಿ ಹಲವು ಕಡೆಗಳಲ್ಲಿದ್ದು, ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿಗಳ (ವಿ.ಎ.ಒ.) ಕಚೇರಿ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ಐದಾರು ದಶಕಗಳ ಹಿಂದಿನ ಕಟ್ಟಡದಲ್ಲಿ ಈ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಹೊಸ ಕಟ್ಟಡ ನಿರ್ಮಾಣವಾಗಬೇಕು ಎನ್ನುವುದು ಇಲ್ಲಿನ ಸ್ಥಳೀಯರ ಹಲವು ದಶಕಗಳ ಬೇಡಿಕೆಯಾಗಿದೆ. ಆದರೆ ಇದಕ್ಕೆ ಇನ್ನೂ ಕಾಲಕೂಡಿ ಬಂದಿಲ್ಲ. ಕಟ್ಟಡದ ಒಂದು ಭಾಗ ಮಳೆಗಾಲದಲ್ಲಿ ಸಂಪೂರ್ಣವಾಗಿ ಸೋರಿ ಕಡತ ಒದ್ದೆಯಾಗುತ್ತಿತ್ತು. ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿರಲಿಲ್ಲ. ಕೆಲವು ತಿಂಗಳ ಹಿಂದೆ ಬ್ರಹ್ಮಾವರ ತಹಶೀಲ್ದಾರ್‌ ಶ್ರೀಕಾಂತ್‌ ಹೆಗ್ಡೆಯವರು ಸಾಲಿಗ್ರಾಮ ಪ.ಪಂ. ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ತಗಡಿನ ಶೀಟ್‌ ಅಳವಡಿಸಿದ್ದು ಇದರಿಂದ ಸೋರುವ ಸಮಸ್ಯೆಗೆ ಸ್ವಲ್ಪ ಮಟ್ಟಿಗಿನ ಮುಕ್ತಿ ಸಿಕ್ಕಿದೆ. ಆದರೂ ಕಟ್ಟಡ ಹಳೆಯದಾದ್ದರಿಂದ ಮಳೆ ನೀರು, ಗೆದ್ದಲು ಸಮಸ್ಯೆ ಆಗಾಗ ಕಾಡುತ್ತದೆ. ಸಮಸ್ಯೆಗೆ ಶಾಶ್ವತ ಪರಿಹಾರವಾಗಬೇಕಾದರೆ ಹೊಸ ಕಟ್ಟಡ ನಿರ್ಮಾಣಗೊಂಡರೆ ಉತ್ತಮ ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.

ವಿಶಾಲ ವ್ಯಾಪ್ತಿ
ಸಾಲಿಗ್ರಾಮ ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ಗುಂಡ್ಮಿ, ಚಿತ್ರಪಾಡಿ, ಪಾರಂಪಳ್ಳಿ, ಕಾರ್ಕಡ ಗ್ರಾಮಗಳನ್ನೊಳಗೊಂಡಿದೆ. ಪ್ರತಿ ನಿತ್ಯ ನೂರಾರು ಮಂದಿ ಗ್ರಾಮಸ್ಥರು ತಮ್ಮ ಕೆಲಸಗಳಿಗಾಗಿ ಇಲ್ಲಿಗೆ ಬರುತ್ತಾರೆ. ಕಡತಗಳ ಸಂಖ್ಯೆ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಾ ಇರುತ್ತದೆ. ಕಚೇರಿಗೆ ಬರುವ ಗ್ರಾಮಸ್ಥರಿಗೆ ಸರಿಯಾಗಿ ಕುಳಿತುಕೊಳ್ಳಲು ಬಿಡಿ ನಿಂತುಕೊಳ್ಳಲೂ ಇಲ್ಲಿ ವ್ಯವಸ್ಥೆ ಇಲ್ಲ.

ಹಲವು ಬಾರಿ ಮನವಿ
ಸಾಲಿಗ್ರಾಮ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಕಟ್ಟಡದ ದುಃಸ್ಥಿತಿ ಬಗ್ಗೆ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕಾಗಿ ನಾಲ್ಕೈದು ವರ್ಷದಿಂದ ಮನವಿ ನೀಡಲಾಗುತ್ತಿದೆ. ಆದರೆ ಇದುವರೆಗೆ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ಕೈಗೊಳ್ಳಬೇಕು.
-ನಾಗರಾಜ್‌ ಗಾಣಿಗ ಸಾಲಿಗ್ರಾಮ, ಸ್ಥಳೀಯರು

ತಾತ್ಕಾಲಿಕ ದುರಸ್ತಿ
ಮಳೆ ಬಂದಾಗ ಕಟ್ಟಡ ಸೋರಿಕೆಯಾಗಿ ಕಡತ ಒದ್ದೆಯಾಗುವ ಕುರಿತು ದೂರುಗಳಿತ್ತು. ಹೀಗಾಗಿ ಒಂದು ಭಾಗದಲ್ಲಿ ಹಂಚಿನ ಮೇಲ್ಛಾವಣೆಯನ್ನು ತೆಗೆದು ಶೀಟ್‌ ಅಳವಡಿಸುವ ಮೂಲಕ ತಾತ್ಕಾಲಿಕ ದುರಸ್ತಿ ಮಾಡಲಾಗಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಸರಕಾರಿ ಜಾಗ ಲಭ್ಯವಿಲ್ಲ. ಈ ಬಗ್ಗೆ ಮುಂದಿನ ಹಂತದಲ್ಲಿ ಪರಿಶೀಲನೆ ನಡೆಸಲಾಗುವುದು.
-ಶ್ರೀಕಾಂತ್‌ ಹೆಗ್ಡೆ, ತಹಶೀಲ್ದಾರರು, ಬ್ರಹ್ಮಾವರ

ಯೋಜನೆ ನನೆಗುದಿಗೆ
ಬಹುತೇಕ ಗ್ರಾಮ ಆಡಳಿತಾಧಿಕಾರಿಗಳ ಕಚೇರಿಗಳು ಗ್ರಾ.ಪಂ., ಪ.ಪಂ. ಬಾಡಿಗೆ ಕಟ್ಟಡವನ್ನೇ ಅವಲಂಬಿಸಿದೆ. ಸಾಲಿಗ್ರಾಮದ ಕಚೇರಿ ಕಟ್ಟಡ ಕೂಡ ಪ.ಪಂ.ಗೆ ಸೇರಿದೆ. ಈ ಹಳೆಯ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸುವ ಕುರಿತು ಈ ಹಿಂದೆ ಪ.ಪಂ. ಸಾಮಾನ್ಯಸಭೆಯಲ್ಲಿ ಚರ್ಚೆಯಾಗಿ ಯೋಜನೆ ರೂಪಿಸಿ ಅನುಮೋದನೆ ಪಡೆಯಲಾಗಿತ್ತು. ಆದರೆ ಆ ಪ್ರಸ್ತಾವನೆ ಕಡತದಲ್ಲೇ ಬಾಕಿ ಉಳಿಯಿತು. ಇದಲ್ಲದೆ ಕಾರ್ಕಡ ರಸ್ತೆಯಲ್ಲಿರುವ ಹಳೇ ಗ್ಯಾಸ್‌ ಗೋಡೌನ್‌ ಕಟ್ಟಡ ಪ್ರಸ್ತುತ ಕಂದಾಯ ಇಲಾಖೆಯ ಹೆಸರಿನಲ್ಲಿರುವುದರಿಂದ ಈ ಕಟ್ಟಡವನ್ನು ಬಾಡಿಗೆಗೆ ಪಡೆದು ಕಚೇರಿ ಆರಂಭಿಸುವ ಕುರಿತು ಚರ್ಚೆಯಾಗಿತ್ತು. ಆದರೆ ಅದೂ ಕೂಡ ಅನುಷ್ಠಾನವಾಗಿಲ್ಲ.

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.