Danger Dengue: ಡೆಂಗ್ಯೂವನ್ನು “ಸಾಂಕ್ರಾಮಿಕ ಕಾಯಿಲೆ” ಎಂದು ಘೋಷಿಸಿದ ರಾಜ್ಯ ಸರಕಾರ

ಹುಷಾರ್‌.. ಇನ್ನು ಮುಂದೆ ಸ್ವಚ್ಛತೆ ಕಾಪಾಡದವರಿಗೆ ಬೀಳುತ್ತೆ ದಂಡದ ಬರೆ, ದಂಡ ಅಸ್ತ್ರ ಪ್ರಯೋಗಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ

Team Udayavani, Sep 3, 2024, 10:04 PM IST

Dengue

ಬೆಂಗಳೂರು:  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗಿ ಜನರಲ್ಲಿ ಆತಂಕ ಮೂಡಿಸುತ್ತಿರುವ  ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪಣತೊಟ್ಟಿದ್ದು, ರೋಗ ಹತೋಟಿಗೆ ತರಲು ಡೆಂಗ್ಯೂ (Dengue) ವನ್ನು “ಸಾಂಕ್ರಾಮಿಕ ಕಾಯಿಲೆ” (Epidemic) ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಈ ಬಗ್ಗೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆ. 31ರ ಕರ್ನಾಟಕ ಗೆಜೆಟ್​​ನಲ್ಲಿ ಅಧಿಸೂಚನೆ ಹೊರಡಿಸಿದ್ದು,  ಇನ್ನು ಮುಂದೆ ನೈರ್ಮಲ್ಯ (ಸ್ವಚ್ಛತೆ) ಕಾಪಾಡದವರಿಗೆ ದಂಡ ಬೀಳಲಿದೆ ಎಂದು ತಿಳಿಸಿದೆ.  ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಬಹುದಾಗಿದೆ.

ಏನೆಲ್ಲಾ ನಿಯಮಗಳು ಅನ್ವಯ: 
* ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.
* ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.
* ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟಿಸ್ ನೀಡಬೇಕು.
24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ.
* ಸ್ವತ್ತಿನ ಮಾಲೀಕರು ನಿಗಾ ವಹಿಸಿದಿದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
ರಾಸಾಯನಿಕ ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರು ನೀಡುವಂತೆ ಕ್ರಮ ವಹಿಸಬೇಕು.
* ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲ್ಲಿ ನಿಂತ ನೀರು ತೆರವುಗೊಳಿಸಲು ಆಯಾ ಮಾಲೀಕರೇ ಹೊಣೆ.


ಸ್ವಚ್ಛತೆ ಕಾಪಾಡದವರಿಗೆ ದಂಡದ ಬರೆ: 
ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘಿಸಿದರೆ – 400 ರೂ. ದಂಡ – ನಗರ ಪ್ರದೇಶ ಗ್ರಾಮಾಂತರದಲ್ಲಿ ಓಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ.

ರೆಸ್ಟೋರೆಂಟ್ , ಹೋಟೆಲ್, ತಿನಿಸುಗಳು, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ, ಮಾರ್ಕೆಟ್, ಪಾರ್ಕ್, ಮಾಲ್, ಸೂಪರ್ ಮಾರ್ಕೆಟ್ , ತೆಂಗಿನಕಾಯಿ ಮಾರಾಟಗಾರರು, ಕಾರ್ಖಾನೆ, ಕೈಗಾರಿಕೆ, ಥಿಯೇಟರ್, ಶಾಲೆಗಳು, ವಾಣಿಜ್ಯ ಸಂಸ್ಥೆಗಳು, ಕನ್ವೆಷನ್ ಹಾಲ್, ಇವುಗಳಲ್ಲಿ ನಿಯಮ ಪಾಲಿಸದಿದ್ದರೆ  ನಗರ ಪ್ರದೇಶದಲ್ಲಿ 1 ಸಾವಿರ ರೂ. ದಂಡ.

ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ. ತೆರೆದ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿದರೆ – ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ, ಗ್ರಾಮಾಂತರದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಡೆಂಗ್ಯೂ ಹತೋಟಿಗೆ ತರಲು ಕಾನೂನು ಅಸ್ತ್ರ : ಸಚಿವ ದಿನೇಶ್‌
ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಡೆಂಗ್ಯೂ ಸಾಂಕ್ರಾ ಮಿಕ ರೋಗವನ್ನಾಗಿ ಘೋಷಿಸುವುದರ ಜತೆಗೆ ನಿಯಂತ್ರಣ ಮಾರ್ಗಸೂಚಿ ಪಾಲಿಸದವರಿಗೆ ದಂಡ ವಿಧಿಸಲಾಗುವುದು.

ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸೊಳ್ಳೆ ಉತ್ಪತ್ತಿ ತಾಣಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂ ನಿನ ಅಸ್ತ್ರ ಬಳಸಬಹುದಾಗಿದೆ. ದಂಡ ವಿಧಿಸುವುದಕ್ಕಿಂತ ಜನರು ಡೆಂಗ್ಯೂ ವಿಚಾರದಲ್ಲಿ ಜವಾ ಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿ ಸಲಿ ಎಂಬ ಉದ್ದೇಶದಿಂದ ರಾಜ್ಯ ಸರಕಾರ ಈ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

“ಈ ಹಿಂದೆ ಬೆಂಗಳೂರು, ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ. ಆದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರು ಡೆಂಗ್ಯೂ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶ ನಮ್ಮದು.” -ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.