SEBI ಮುಖ್ಯಸ್ಥೆ ಪಿಂಚಣಿ ವೇತನಕ್ಕಿಂತ ಹೆಚ್ಚಿರಲು ಹೇಗೆ ಸಾಧ್ಯ?: ಕಾಂಗ್ರೆಸ್
ಮಾಧವಿ ವಾರ್ಷಿಕ ಸರಾಸರಿ ವೇತನ 1.70 ಕೋಟಿ ರೂ.: ಕಾಂಗ್ರೆಸ್
Team Udayavani, Sep 3, 2024, 8:41 PM IST
ನವದೆಹಲಿ: ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರು ವೇತನ ಪಡೆದಿಲ್ಲ. ಬದಲಿಗೆ ತಮ್ಮ ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪಡೆದಿದ್ದಾರೆ ಎಂದು ಐಸಿಐಸಿಐ ಬ್ಯಾಂಕ್ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಮತ್ತೆ ತಿರುಗೇಟು ನೀಡಿರುವ ಕಾಂಗ್ರೆಸ್, ಪಿಂಚಣಿ ಸೌಲಭ್ಯಗಳು ವೇತನಕ್ಕಿಂತ ಹೆಚ್ಚಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.
ಮಾಧವಿ ಅವರು ಐಸಿಐಸಿಐನಿಂದ 16.80 ಕೋಟಿ ರೂ. ವೇತನ ಪಡೆದಿದ್ದಾರೆಂದು ಕಾಂಗ್ರೆಸ್ ಆರೋಪಿಸಿದ ಬೆನ್ನಲ್ಲೇ ಐಸಿಐಸಿಐ ಸ್ಪಷ್ಟನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ, ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುವಾಗ ಮಾಧವಿ ಅವರ ವಾರ್ಷಿಕ ಸರಾಸರಿ ವೇತನ 1.30 ಕೋಟಿ ರೂ. ಇತ್ತು. ನಿವೃತ್ತಿ ನಂತರದ ಸೌಲಭ್ಯಗಳು ಮತ್ತು ಪಿಂಚಣಿ ಸರಾಸರಿ 2.77 ಕೋಟಿ ರೂ. ಆಗುತ್ತಿದೆ. ಹೀಗಿರುವಾಗ 16 ಕೋಟಿ ನಿವೃತ್ತಿ ನಂತರದ ಸೌಲಭ್ಯ ಪಡೆಯಲು ಹೇಗೆ ಸಾಧ್ಯ? ವೇತನಕ್ಕಿಂತ ಪಿಂಚಣಿ ಹೆಚ್ಚಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ, ಅವರು ಸೆಬಿಯ ಪೂರ್ಣಾವಧಿ ಸದಸ್ಯೆಯಾಗುವ ಮತ್ತು ಐಸಿಐಸಿಐ ಬ್ಯಾಂಕಿನಲ್ಲಿರುವಾಗ ವೇತನ ಪಡೆದಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.