High Court: ಕೋಳಿ ತ್ಯಾಜ್ಯ ನಿರ್ವಹಣ ಘಟಕ ಸ್ಥಳಾಂತರ ದ.ಕನ್ನಡ ಜಿಲ್ಲಾಡಳಿತಕ್ಕೆ ನೋಟಿಸ್‌

ವಿಚಾರಣೆ ಸೆ. 18ಕ್ಕೆ ಮುಂದೂಡಿದ ವಿಭಾಗೀಯ ನ್ಯಾಯಪೀಠ

Team Udayavani, Sep 4, 2024, 6:25 AM IST

Udayavani Kannada Newspaper

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಿಣಿಗೆಮುಟ್ನೂರು ಗ್ರಾಮದ ಪಂಚೋಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕೋಳಿ ತ್ಯಾಜ್ಯ ನಿರ್ವಹಣೆ ಘಟಕವನ್ನು ಸ್ಥಳಾಂತರಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಗ್ರಾಮಸ್ಥರಾದ ಬಿ. ಪ್ರವೀಣ್‌ ಹಾಗೂ ಇತರ 10 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯ
ಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿ, ಪುತ್ತೂರು ತಹಶೀಲ್ದಾರ್‌, ನೆಟ್ಟಿಣಿಗೆಮುಟ್ನೂರು ಗ್ರಾ.ಪಂ. ಅಧ್ಯಕ್ಷ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಸೆ. 18ಕ್ಕೆ ಮುಂದೂಡಿತು.

ಕೇಶವ ಪಾಟಾಳಿ ಅವರ ಜಾಗದಲ್ಲಿ ರಾಸಾಯನಿಕ ಸಹಿತ ಪ್ರಾಣಿ ತ್ಯಾಜ್ಯ ನಿರ್ವಹಣ ಘಟಕ ಇದ್ದು, ದಿನದ 24 ಗಂಟೆಯೂ 2 ಕಿ.ಮೀ. ವ್ಯಾಪ್ತಿ ದುರ್ಗಂಧ ಮಯವಾಗಿ ಉಸಿರಾಡಲು ಕಷ್ಟವಾಗಿದೆ. ಸಮೀಪದಲ್ಲೇ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿದ್ದು ಅಲ್ಲಿನ ಮಕ್ಕಳಿಗೆ ತೀವ್ರತರವಾದ ಆರೋಗ್ಯ ತೊಂದರೆ ಉಂಟಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಈ ಎಲ್ಲ ಕಾರಣಗಳಿಂದ ತ್ಯಾಜ್ಯ ನಿರ್ವಹಣ ಘಟಕವನ್ನು ಸ್ಥಳಾಂತರಿಸುವಂತೆ ಸಂಬಂಧ ಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.