ಮತಾಂತರವಾದ ದಲಿತರ ಮೀಸಲಿಗೆ ವಿರೋಧ

ನ್ಯಾ| ಕೆ.ಜಿ. ಬಾಲಕೃಷ್ಣನ್‌ ನೇತೃತ್ವದ ವಿಚಾರಣ ಆಯೋಗಕ್ಕೆ ದಲಿತ ಸಂಘಟನೆಗಳ ಮನವಿ

Team Udayavani, Sep 4, 2024, 6:18 AM IST

reಮತಾಂತರವಾದ ದಲಿತರ ಮೀಸಲಿಗೆ ವಿರೋಧ

ಬೆಂಗಳೂರು: ದಲಿತ ಸಮುದಾಯದಿಂದ ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಯಾವುದೇ ಕಾರಣಕ್ಕೂ ಹಿಂದೂ ದಲಿತ ಸಮುದಾಯಗಳಿಗೆ ಸಂವಿಧಾನದತ್ತವಾಗಿ ಕಲ್ಪಿಸಲಾಗಿರುವ ಮೀಸಲಾತಿಯನ್ನು ಮುಂದುವರಿಸಬಾರದು. ಅವರನ್ನು ದಲಿತರು ಎಂದು ಪರಿಗಣಿಸಬಾರದು ಎಂಬ ಹಕ್ಕೊತ್ತಾಯವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ಅವರ ನೇತೃತ್ವದ ವಿಚಾರಣ ಆಯೋಗದ ಮುಂದೆ ರಾಜ್ಯದ ವಿವಿಧ ದಲಿತಪರ ಸಂಘಟನೆಗಳು ಮಂಡಿಸಿದವು.

ಪ. ಜಾತಿಯ ವ್ಯಕ್ತಿಗಳು ಬೇರೆ ಧರ್ಮಗಳಿಗೆ ಮತಾಂತರಗೊಂಡರೆ ಅವರಿಗೆ ಪ. ಜಾತಿ ಸ್ಥಾನ ನೀಡಬೇಕೇ ಎಂಬುದನ್ನು ಪರಿಶೀಲಿಸಲು ಕೇಂದ್ರ ಸರಕಾರವು ನ್ಯಾ| ಬಾಲಕೃಷ್ಣನ್‌ ನೇತೃತ್ವದಲ್ಲಿ ವಿಚಾರಣ ಆಯೋಗ ನೇಮಿಸಿದೆ. ನಿವೃತ್ತ ಐಎಎಸ್‌ ಅಧಿಕಾರಿ ಡಾ| ರವೀಂದರ್‌ ಕುಮಾರ್‌ ಜೈನ್‌ ಮತ್ತು ಪ್ರಾಧ್ಯಾಪಕಿ ಸುಷ್ಮಾ ಯಾದವ್‌ ಸದಸ್ಯರಾಗಿದ್ದಾರೆ. ಈ ಆಯೋಗ ರಾಜ್ಯಕ್ಕೆ ಭೇಟಿ ನೀಡಿದ್ದು, ಮೀಸಲಾತಿ ಮುಂದುವರಿಕೆ ಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿತು.

ಅಖಿಲ ಭಾರತ ಬಂಜಾರ ಸಮಿತಿ, ಬೋವಿ ಒಕ್ಕೂಟ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಆದಿವಾಸಿ ಸಮುದಾಯ, ಬುಡಕಟ್ಟು ಸಮು ದಾಯ ಸಮಿತಿ ಸೇರಿದಂತೆ ಹಲವು ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿ ಮುಸ್ಲಿಂ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬಾರದು ಎಂದು ಆಯೋಗಕ್ಕೆ ಮನವಿ ಸಲ್ಲಿಸಿದರು.

ನಮ್ಮ ಕೋಟಾದ ಮೀಸಲಾತಿ ನೀಡಬೇಡಿ
ವಿಷಯ ಮಂಡಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡ ಡಿ.ಜಿ. ಸಾಗರ್‌, ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸುವುದಕ್ಕೆ ಆಕ್ಷೇಪ ಇಲ್ಲ. ಆದರೆ ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಮೀಸಲಾತಿ ಕೋಟಾದಿಂದ ಕಡಿತಗೊಳಿಸಿ, ದಲಿತ ಕ್ರಿಶ್ಚಿಯನ್‌, ದಲಿತ ಕ್ರೈಸ್ತರಿಗೆ ನೀಡಬಾರದು. ಯಾವ ಧರ್ಮಕ್ಕೆ ಮತಾಂತರಗೊಂಡಿದ್ದಾರೆಯೋ ಆ ಧರ್ಮಕ್ಕೆ ನಿಗದಿಪಡಿಸಿದ ಮೀಸಲಾತಿ ಕೋಟಾದಿಂದ ಕಡಿತಗೊಳಿಸಿ ಕೊಡುವುದಾದರೆ ನಮ್ಮ ಅಭ್ಯಂತರವಿಲ್ಲ ಎಂದರು.

ಸಕಲೇಶಪುರದ ಶಾಸಕ ಮಂಜುನಾಥ್‌ ಮಾತನಾಡಿ, ಹಿಂದೂ ಧರ್ಮದಿಂದ ಬೇರೆ ಧರ್ಮಕ್ಕೆ ಮತಾಂತರವಾದವರಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ವಿರೋಧವಿದೆ. ಈ ನೆಲದ ಮೂಲ ಧರ್ಮಗಳಿಗೆ ಮತಾಂತರವಾದರೆ ಮಾತ್ರ ಮೀಸಲಾತಿ ಮುಂದವರಿಸಬಹುದೆಂದು ಅಂಬೇಡ್ಕರ್‌ ಅವರೇ ಹೇಳಿದ್ದಾರೆ ಎಂದರು.

ಶಿಕ್ಷಕ ಸಂಜೀವಪ್ಪ ಮಾತನಾಡಿ, ಹಿಂದೂ ದಲಿತ ಮಕ್ಕಳು ಬಡ ವರ್ಗದವರಾಗಿದ್ದಾರೆ. ಕನ್ನಡ ಶಾಲೆಗಳಲ್ಲಿ, ಸರಕಾರಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ. ಆಮಿಷಗಳಿಗೆ ಬಲಿಯಾಗಿಮತಾಂತರಗೊಂಡಿರುವ ವರ ಮಕ್ಕಳುದೊಡ್ಡ ದೊಡ್ಡ ಖಾಸಗಿ ಶಿಕ್ಷಣ ಸಂಸ್ಥೆ ಯಲ್ಲಿ ಕಲಿಯುತ್ತಿದ್ದಾರೆ. ಅವರಿಗೆ ಕ್ರೈಸ್ತ ಮಿಷನರಿಗಳು ಸವಲತ್ತು ನೀಡಿವೆ. ಆರ್ಥಿಕವಾಗಿ ಸಶಕ್ತರಾಗಿದ್ದಾರೆ. ಆ ಮಕ್ಕಳೊಂದಿಗೆ ಸರಕಾರಿ ಶಾಲೆಯಲ್ಲಿ ಕಲಿತಿ ರುವ ನಮ್ಮ ಮಕ್ಕಳು ಪೈಪೋಟಿ ನಡೆಸಲು ಸಾಧ್ಯವಿಲ್ಲ. ನಮ್ಮೆಲ್ಲ ಮೀಸಲಾತಿ ಮತಾಂತರಗೊಂಡವರ ಪಾಲಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದರು.

ಹೇಳಿದ್ದನ್ನೆ ಹೇಳಬೇಡಿ: ನ್ಯಾಯಮೂರ್ತಿ ಗರಂ
ಅಹವಾಲು ಸಲ್ಲಿಕೆ ವೇಳೆ ದಲಿತ ಸಮುದಾಯದ ಮುಖಂಡರು ರಾಜಕೀಯ ಭಾಷಣದ ರೀತಿಯಲ್ಲಿ ಮಾತನಾಡುತ್ತಿದ್ದರು. ಒಬ್ಬರು ಹೇಳಿ ದ್ದನ್ನೇ ಮತ್ತೂಬ್ಬರು ಪುನರಾವರ್ತನೆ ಮಾಡುತ್ತಿದ್ದರು. ಇದರಿಂದ ಸಿಟ್ಟಾದ ನ್ಯಾ| ಬಾಲಕೃಷ್ಣನ್‌, ಮತಾಂತರದ ಬಗ್ಗೆ ರಾಜಕೀಯ ವಿಚಾರಗಳನ್ನು ತರಬೇಡಿ. ಮತಾಂತರಗೊಂಡವರಿಗೆ ಮೀಸಲಾತಿ ಮುಂದುವರಿಸ ಬೇಕೇ, ಬೇಕಾದರೆ ಏಕೆ ಬೇಕು, ಬೇಡವಾದರೆ ಏಕೆ ಬೇಡ ಎಂದಷ್ಟೇ ಹೇಳಿ. ಒಬ್ಬರು ಹೇಳಿದ್ದನ್ನೇ ಮತ್ತೆ ಮತ್ತೆ ಹೇಳಬೇಡಿ ಎಂದು ಗರಂ ಆದರು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.