Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Team Udayavani, Sep 4, 2024, 6:00 AM IST

CBi

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾಗಿರುವ ಸಿಬಿಐ ತನಿಖೆಗೆ ಕೈಗೆತ್ತಿಕೊಂಡಿರುವ ಪ್ರಕರಣಗಳಲ್ಲಿ 6,903 ಭ್ರಷ್ಟಾಚಾರ ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿ ಬಾಕಿ ಉಳಿದಿವೆ . ಅವುಗಳಲ್ಲಿ ಕೆಲವು ದಶಕಗಳಷ್ಟು ಹಳೆಯವು ಎಂಬ ಮಾಹಿತಿಯನ್ನು ಕೇಂದ್ರ ವಿಚಕ್ಷಣ ದಳ ತನ್ನ ವಾರ್ಷಿಕ ವರದಿಯಲ್ಲಿ ಹೊರಗೆಡಹಿದೆ. ಒಂದು ದೇಶದ ಉನ್ನತ ತನಿಖಾ ಸಂಸ್ಥೆಯಲ್ಲಿ ಇಷ್ಟೊಂದು ಪ್ರಕರಣಗಳು ಬಾರಿ ಇರುವುದು ನಿಜಕ್ಕೂ ಆಘಾತಕಾರಿ ವಿಷಯವೇ ಆಗಿದೆ.

ದೇಶದ ತನಿಖಾ ವ್ಯವಸ್ಥೆಯಲ್ಲಿ ಸ್ವಾಯತ್ತ ಮತ್ತು ಅತ್ಯುನ್ನತ ತನಿಖಾ ಸಂಸ್ಥೆಯಾ ಗಿರುವ ಸಿಬಿಐನಲ್ಲಿ ಪ್ರಕರಣಗಳ ವಿಲೇವಾರಿ ಇಷ್ಟೊಂದು ವಿಳಂಬಗತಿಯಲ್ಲಿ ಸಾಗುತ್ತಿ ರುವುದು ಯಾರಿಗೂ ಶೋಭೆಯಲ್ಲ. ದೇಶದ ಯಾವುದೇ ರಾಜ್ಯದಲ್ಲಿ ಭ್ರಷ್ಟಾಚಾರದ ಬೃಹತ್‌ ಪ್ರಕರಣಗಳು ವರದಿಯಾದಾಗಲೆಲ್ಲ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸ ಬೇಕೆಂಬ ಆಗ್ರಹ ಕೇಳಿಬರುತ್ತದೆ.

ಆಯಾಯ ರಾಜ್ಯ ಸರಕಾರದ ಶಿಫಾರಸಿನ ಮೇಲೆ ಸಿಬಿಐ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುತ್ತದೆ. ಸಿಬಿಐ ತನಿಖೆಗೆ ಒಪ್ಪಿಸ ಲಾಗುವ ಬಹುತೇಕ ಪ್ರಕರಣಗಳು ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದವು ಗಳಾಗಿದ್ದು, ದಾಖಲೆಗಳ ಸಂಗ್ರಹಕ್ಕಾಗಿ ಹಲವು ಇಲಾಖೆಗಳಿಗೆ ಅಲೆದಾಟ, ಆರೋಪಕ್ಕೆ ಪೂರಕವಾದ ಸಾಕ್ಷ್ಯಾಧಾರಗಳ ಸಂಗ್ರಹ, ಸಾಕ್ಷಿಗಳ ಹಾಜರಾತಿ ಇವೆಲ್ಲದಕ್ಕೂ ಸಾಕಷ್ಟು ಸಮಯ ತಗಲುತ್ತದೆ.

ಇನ್ನು ಸಿಬಿಐ ಮೇಲೆ ಭಾರೀ ಪ್ರಮಾಣದ ಕಾರ್ಯ ದೊತ್ತಡ ವಿರುವುದು ಕೂಡ ತನಿಖೆ ಮತ್ತು ವಿಚಾರಣೆ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಸಿಬಂದಿ ಇಲ್ಲದಿರುವುದು, ನ್ಯಾಯಾಲಯಗಳಲ್ಲಿನ ಮೂಲಸೌಕರ್ಯ ಕೊರತೆ ಇವೆಲ್ಲವೂ ಸಿಬಿಐನ ಒಟ್ಟಾರೆ ಕಾರ್ಯವಿಧಾನದ ಮೇಲೆ ಪರಿಣಾಮ ಬೀರುತ್ತಿದೆ. ಇವೆಲ್ಲದರ ಫ‌ಲವಾಗಿ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ.

ಭ್ರಷ್ಟಾಚಾರ ಸಹಿತ ಗಂಭೀರ ಅಪರಾಧ ಪ್ರಕರಣಗಳ ನ್ಯಾಯಸಮ್ಮತ ತನಿಖೆ ಮತ್ತು ವಿಚಾರಣೆಯ ದೃಷ್ಟಿಯಿಂದ ಅವುಗಳ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸ ಲಾಗುತ್ತದೆ. ಆದರೆ ಸಿಬಿಐ ದೇಶದ ಇತರ ತನಿಖಾ ಸಂಸ್ಥೆಗಳು ಮತ್ತು ನ್ಯಾಯಾಲಯಗಳಂತೆ ಇಡೀ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿರುವುದರಿಂದಾಗಿ ತನಿಖಾ ಸಂಸ್ಥೆಯ ಮೇಲಣ ವಿಶ್ವಾಸಾರ್ಹತೆಯನ್ನು ಜನತೆ ಕಳೆದುಕೊಳ್ಳುವಂತಾಗಿದೆ.

ಈ ಕಾರಣದಿಂದಾಗಿಯೇ ಸಿಬಿಐ ಕೂಡ ಭ್ರಷ್ಟರು ಮತ್ತು ಅಪರಾಧಿಗಳ ಪಾಲಿಗೆ ಬೆದರು ಗೊಂಬೆಯಾಗಿ ಮಾರ್ಪಡುವಂತಾಗಿದೆ. ತ್ವರಿತಗತಿಯಲ್ಲಿ ತನಿಖಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದರ ಜತೆಯಲ್ಲಿ ಅಪರಾಧಿಗೆ ಶೀಘ್ರ ಶಿಕ್ಷೆಯಾಗಬೇಕು ಎಂಬ ಉದ್ದೇಶದಿಂದ ಪ್ರಕರಣಗಳನ್ನು ಸಿಬಿಐಗೆ ವಹಿಸುತ್ತ ಬರಲಾಗುತ್ತಿದೆಯಾದರೂ ಸಿಬಿಐ ಇಷ್ಟೊಂದು ಭಾರೀ ಸಂಖ್ಯೆಯ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿರುವುದನ್ನು ನೋಡಿದಾಗ ಜನರ ನಿರೀಕ್ಷೆ ಹುಸಿಯಾದಂತೆ ತೋರುತ್ತಿದೆ.

ದಶಕದ ಹಿಂದೆ ಸಿಬಿಐ ಸಾಕಷ್ಟು ವಿವಾದಕ್ಕೀಡಾಗಿತ್ತಲ್ಲದೆ ಆಡಳಿತಾರೂಢ ಪಕ್ಷಗಳು ಸಿಬಿಐಯನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊ ಳ್ಳುತ್ತಿದ್ದು ಅದು ಪಂಜರದ ಗಿಣಿಯಾಗಿ ಮಾರ್ಪಟ್ಟಿದೆ ಎಂದು ಸುಪ್ರೀಂ ಕೋರ್ಟ್‌ ಕಟು ಮಾತಿನಲ್ಲಿ ಸಿಬಿಐ ಕಾರ್ಯವೈಖರಿಯ ಬಗೆಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ ಈಗ ಸಿಬಿಐ ತನ್ನ ನಿಧಾನಗತಿಯ ತನಿಖಾ ಪ್ರಕ್ರಿಯೆಯಿಂದ ಸುದ್ದಿಯಲ್ಲಿದೆ.

ಸಿಬಿಐ ಮೇಲಣ ಜನರ ವಿಶ್ವಾಸವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ತತ್‌ಕ್ಷಣ ಕಾರ್ಯಪ್ರವೃತ್ತವಾಗಬೇಕಿದೆ. ಸಿಬಿಐಗೆ ಅಗತ್ಯ ಸಂಖ್ಯೆಯ ಸಿಬಂದಿಯನ್ನು ನೇಮಿಸುವುದರ ಜತೆಯಲ್ಲಿ, ತ್ವರಿತಗತಿಯ ನ್ಯಾಯಾಲಯಗಳನ್ನು ಸ್ಥಾಪಿಸಿ, ಪ್ರಕರಣಗಳ ಕ್ಷಿಪ್ರ ವಿಲೇವಾರಿಗೆ ಅನುವು ಮಾಡಿಕೊಡಬೇಕು. ಇದೇ ವೇಳೆ ರಾಜ್ಯ ಸರಕಾರಗಳು ಕೂಡ ಸಿಬಿಐಗೆ ಒಪ್ಪಿಸಲಾಗುವ ಪ್ರಕರಣಗಳ ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಬೇಕು. ಸಿಬಿಐ ಕೂಡ ತನ್ನ ಹೊಣೆಗಾರಿಕೆ ಮತ್ತು ಜನತೆ ತನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಒಂದಿಷ್ಟು ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು. ಇವೆಲ್ಲವೂ ಸಾಧ್ಯವಾದಾಗ ಮಾತ್ರ ಸಿಬಿಐ ತನ್ನ ಗತವೈಭವವನ್ನು ಕಂಡುಕೊಳ್ಳಲು ಸಾಧ್ಯ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.