Shaving ಮಾಡದಕ್ಕೆ ಜ್ಯೂನಿಯರ್ ಮೇಲೆ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ!

ಗಡ್ಡ, ಮೀಸೆ ಟ್ರಿಮ್‌ ಮಾಡಿಕೊಂಡು ಬರಲು ಹೇಳಿದ್ದ ಸೀನಿಯರ್‌

Team Udayavani, Sep 4, 2024, 8:44 AM IST

attack

ಬೆಂಗಳೂರು: ಶೇವ್‌ ಮಾಡಿಲ್ಲ ಎಂಬ ಕಾರಣಕ್ಕೆ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಹಲ್ಲೆಗೊಳಗಾದ ಕೇರಳ ಮೂಲದ ವಿದ್ಯಾರ್ಥಿ ಧ್ರುವ ಎಂಬಾತನ ತಂದೆ ನೀಡಿದ ದೂರಿನ ಮೇರೆಗೆ ಬೆಳ್ಳಂದೂರು ಪೊಲೀಸರು 10 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ. ಈ ಸಂಬಂಧ ವಿಷ್ಣು, ಶರತ್‌ ಸೇರಿ ಮೂವರು ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ.

ಹಲ್ಲೆ ನಡೆಸಿದವರು ವಿದ್ಯಾರ್ಥಿಗಳಾದರಿಂದ ನೋಟಿಸ್‌ ಕೊಡಲಾಗಿದ್ದು, ಅವರ ಹೇಳಿಕೆ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು. ಕೇರಳ ಮೂಲದ ವಿದ್ಯಾರ್ಥಿ ಚಿಕ್ಕ ಬೆಳ್ಳಂದೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾನೆ.

ದೊಡ್ಡ ಸಿದ್ದಾಪುರದಲ್ಲಿ ಸ್ನೇಹಿತರ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. ಕೆಲ ತಿಂಗಳ ಹಿಂದೆ ಕಾಲೇಜಿಗೆ ಹೋದಾಗ, ಕೆಲ ಹಿರಿಯ ವಿದ್ಯಾರ್ಥಿಗಳು, ಕಾಲೇಜಿಗೆ ಶೇವ್‌ ಮಾಡಿಕೊಂಡು ಬರಬೇಕು ಎಂದು ತಾಕೀತು ಮಾಡಿದ್ದಾರೆ. ಆಗ ಧ್ರುವ ಸಾಧ್ಯವಿಲ್ಲ ಎಂದು ಹೇಳಿದ್ದ. ಇದೇ ವಿಚಾರಕ್ಕೆ ಆರೋಪಿತ ವಿದ್ಯಾರ್ಥಿಗಳು ಧ್ರುವಗೆ ನಾಲ್ಕೈದು ಬಾರಿ ಎಚ್ಚರಿಕೆ ನೀಡಿದ್ದಾರೆ. ಆದರೆ, ಧ್ರುವ ಯಾವುದಕ್ಕೂ ತಲೆಕೆಡಿಸಿಕೊಂಡಿರಲಿಲ್ಲ.
ಅದರಿಂದ ಕೋಪಗೊಂಡಿದ್ದ ಹಿರಿಯ ವಿದ್ಯಾರ್ಥಿಗಳು, ಆ.30 ರಂದು ಕರೆ ಮಾಡಿ ಸಿದ್ದಾಪುರದ ಚರ್ಚ್‌ ಬಳಿ ಬರುವಂತೆ ಕರೆಸಿಕೊಂಡಿದ್ದಾರೆ. ಬರುವಾಗಲೇ ಗಡ್ಡ ಹಾಗೂ ಮೀಸೆ ಟ್ರಿಮ್‌ ಮಾಡಿ ಕೊಂಡು ಬರಬೇಕು ಎಂದು ಸೂಚಿಸಲಾಗಿತ್ತು. ಆದರೂ ಯಾಕೆ ಹಾಗೆಯೇ ಬಂದಿರುವೆ ಎಂದಿ ದ್ದಾರೆ. ಅದನ್ನು ಧ್ರುವ ನಿರಾಕರಣೆ ಮಾಡಿದಾಗ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿ ತಂದೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.