Renukaswamy Case: ಡಿ-ಗ್ಯಾಂಗ್‌ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್‌ಗೆ ಸಲ್ಲಿಕೆ


Team Udayavani, Sep 4, 2024, 12:08 PM IST

Renukaswamy Case: ಡಿ-ಗ್ಯಾಂಗ್‌ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್‌ಗೆ ಸಲ್ಲಿಕೆ

ಬೆಂಗಳೂರು: ರೇಣಕಾಸ್ವಾಮಿ ಕೊಲೆ(Renukaswamy Case) ಪ್ರಕರಣದ ದೋಷಾರೋಪ ಪಟ್ಟಿಯನ್ನು (Charge sheet) ತನಿಖಾಧಿಕಾರಿಗಳು ಬುಧವಾರ (ಸೆ.4ರಂದು) ಕೋರ್ಟ್‌ಗೆ ಸಲ್ಲಿಸಿದ್ದಾರೆ.

ತನಿಖಾಧಿಕಾರಿ ಎಸಿಪಿ ಚಂದನ್‌(ACP Chandan) ಅವರ ನೇತೃತ್ವದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಲಾಗಿದೆ. ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವುದಾಗಿ ತಿಳಿದುಬಂದಿದೆ.

ಪ್ರಕರಣದಲ್ಲಿ ದರ್ಶನ್‌(Darshan) ಎ2 ಆಗಿದ್ದು, ಪವಿತ್ರಾ ಗೌಡ(Pavithra Gowda) ಎ1 ಆಗಿದ್ದಾರೆ ಎಂದು ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಮೊದಲು ದರ್ಶನ್‌ ಅವರನ್ನು ಎ1 ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಫ್‌ ಎಲ್‌ನ ಕೆಲವು ವರದಿಗಳು ಬರಲು ಬಾಕಿಯಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಂತದ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ ಎನ್ನಲಾಗಿದೆ.

ಹಲವು ಸಾಕ್ಷ್ಯಗಳ ಉಲ್ಲೇಖ: ಕೋರ್ಟ್‌ಗೆ ಸಲ್ಲಿಕೆ ಮಾಡಿರುವ ದೋಷಾರೋಪಪಟ್ಟಿಯಲ್ಲಿ ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳನ್ನು ಉಲ್ಲೇಖ ಮಾಡಲಾಗಿದೆ. 3 ಪ್ರತ್ಯಕ್ಷ ಸಾಕ್ಷಿಗಳಿದ್ದು, ಎಫ್​ಎಸ್​ಎಲ್​ ಮತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳಿವೆ. 27 ಜನರ 164ರ ಅಡಿಯಲ್ಲಿ ಹೇಳಿಕೆ, 161 ಅಡಿಯಲ್ಲಿ 70 ಜನರ ಹೇಳಿಕೆಯನ್ನು ಪೊಲೀಸರು  ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ 59 ಜನ ಸಮಕ್ಷಮದಲ್ಲಿ ಮಹಜರು ಮಾಡಲಾಗಿದೆ. 8 ವೈದ್ಯರು, ತಹಶೀಲ್ದಾರ್‌ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಾಕ್ಷಿ ಕೂಡ ಉಲ್ಲೇಖ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಮಿಷನರ್‌ ಹೇಳಿದ್ದೇನು? : ಪ್ರಕರಣ ಸಂಬಂಧ ಕಮಿಷನರ್ ದಯಾನಂದ್ ಮಾತನಾಡಿ,  ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣವಾಗಿ ಮುಗಿದಿದೆ. ಇಂದು ಅಂತಿಮ ವರದಿ ಸಲ್ಲಿಕೆ ಮಾಡಿದ್ದೇವೆ. ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಸಿಎಫ್‌ ಎಲ್‌ ನಿಂದ ಎಲ್ಲಾ ವರದಿಗಳು ಬಂದಿದ್ದು, ಎಸ್‌ ಎಫ್‌ ಎಲ್‌ ನಿಂದ ಕೆಲ ವರದಿಗಳು ಬರಲು ಬಾಕಿಯಿದೆ. 7 ಸಂಪುಟಗಳ,10 ಕಡತಗಳನ್ನು ಒಳಗೊಂಡ 3991 ಪುಟಗಳ ಬೃಹತ್‌ ಚಾರ್ಜ್‌ ಶೀಟ್‌ ಇದು. ಇದರಲ್ಲಿ ಪ್ರತ್ಯಕ್ಷ ಸಾಕ್ಷಿ 3ಗಳಿದ್ದು, 27 ಸಾಕ್ಷಿ ಜನರ ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ. 59 ಜನರ ಪಂಚನಾಮೆ ನಡೆಸಲಾಗಿದೆ. ತಹಶೀಲ್ದಾರು, ಇಂಜಿನಿಯರ್‌, ವೈದ್ಯರು ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳ ಹೇಳಿಕೆ ಸೇರಿದಂತೆ 231 ಸಾಕ್ಷಿಗಳಿವೆ. ಮುಂದಿನ ತನಿಖೆಯನ್ನು 174ರ ಅಡಿಯಲ್ಲಿ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಶೀಘ್ರದಲ್ಲಿ ಪ್ರಕರಣವನ್ನು ಸೆಷೆನ್ಸ್‌ ಕೋರ್ಟ್‌ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ: ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ  ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ.

ಈ ಕಾರಣದಿಂದ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್‌ ಎನ್ನುವವರ ಶೆಡ್‌ ಗೆ ಕರೆತಂದು ಬಲವಾದ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್‌ ಮೆಂಟ್‌ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದೇಹದ ಮೇಲಿನ ಗಾಯಗಳನ್ನು ಗುರುತಿಸಿ ತನಿಖೆಯನ್ನು ಆರಂಭಿಸಲಾಗಿತ್ತು. ಮೊದಲು ವಶಕ್ಕೆ ಪಡೆದ ನಾಲ್ವರು ಆರೋಪಿಗಳು ದರ್ಶನ್‌ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ವಿಚಾರಣೆಯಲ್ಲಿ ಹೇಳಿದ್ದರು.

ಈ ಪ್ರಕರಣ ಸಂಬಂಧ ತನಿಖೆ ಪ್ರಕ್ರಿಯೆ ಮುಂದುವರೆದಂತೆ ಒಟ್ಟು 17 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಟಾಪ್ ನ್ಯೂಸ್

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.