Sandalwood: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ತನಿಖೆ ಆಗಬೇಕು: ಸಿಎಂಗೆ ಪತ್ರ
Team Udayavani, Sep 4, 2024, 1:02 PM IST
ಬೆಂಗಳೂರು: ಮಾಲಿವುಡ್(Mollywood) ಸಿನಿಮಾರಂಗದಲ್ಲಿ ಹೇಮಾ ಸಮಿತಿ ವರದಿ(Hema Committee Report) ಬಳಿಕ ದಿಗ್ಗಜ ಕಲಾವಿದರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬರುತ್ತಿದೆ. ಕೆಲ ಕಲಾವಿದರ ವಿರುದ್ಧ ದೂರು ಕೂಡ ದಾಖಲಾಗಿದೆ.
ಇತ್ತ ಮಾಲಿವುಡ್ ಬಳಿಕ ಟಾಲಿವುಡ್, ಕಾಲಿವುಡ್ ಹಾಗೂ ಸ್ಯಾಂಡಲ್ ವುಡ್‌ನ ಕೆಲ ಕಲಾವಿದರು ಕೂಡ ಹೇಮಾ ಸಮಿತಿಯಂತೆ ತಮ್ಮ ಚಿತ್ರರಂಗದಲ್ಲೂ ಒಂದು ಸಮಿತಿ ರಚನೆ ಆಗಬೇಕೆಂದು ಒಂದಾಗಿ ಧ್ವನಿಗೂಡಿಸಿದ್ದಾರೆ.
ಇದನ್ನೂ ಓದಿ: Renukaswamy Case: ಡಿ-ಗ್ಯಾಂಗ್ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್‌ಗೆ ಸಲ್ಲಿಕೆ
ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಒಂದು ಸಮಿತಿ ರಚನೆ ಆಗಬೇಕೆಂದು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ(ಫೈರ್) ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದೆ.
FIRE—Film Industry for Rights & Equality —has worked to build gender-equitable KFI since 2017
Today 153 gender justice advocates have signed on to FIRE’s demand that KA govt constitute a retired judge-led committee to bring out report on women’s issues & sexual harassment in KFI pic.twitter.com/4AufQWjsNo
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) September 4, 2024
ಏನಿದು ಫೈರ್?: ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳಾ ಕಲಾವಿದರು ತಮಗೆ ಲೈಂಗಿಕ ಕಿರುಕುಳ ಅಥವಾ ಯಾವುದಾದರೂ ಇತರೆ ಸಮಸ್ಯೆ ಕಾಣಿಸಿಕೊಂಡರೆ ದೂರು ನೀಡಲು ಹುಟ್ಟುಕೊಂಡ ಆಂತರಿಕ ದೂರು ಸಮಿತಿಯೇ ʼಫೈರ್ʼ. ಈ ಕಮಿಟಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಸೇರಿದಂತೆ ಇತರೆ ಕಲಾವಿದರನ್ನು ಒಳಗೊಂಡಿದೆ.
ಬೇಡಿಕೆಗಳೇನು?:
ಮೊದಲ ಬೇಡಿಕೆ:
ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ ವರದಿ ಮಾಡಲು ಸಮಿತಿ ರಚನೆ ಆಗಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದೆ.
ಎರಡನೇ ಬೇಡಿಕೆ: ಚಿತ್ರ್ಯೋದಮದಲ್ಲಿ ಎಲ್ಲಾ ಮಹಿಳೆಯರಿಗೂ ಸುರಕ್ಷಿತವಾದ ಮತ್ತು ನ್ಯಾಯಯುತವಾದ ವಾತಾವರಣವನ್ನು ಸೃಷ್ಟಿಸಲು ಅದಕ್ಕೆ ತಕ್ಕ ನಿಯಮಗಳನ್ನು ರಚಿಸಬೇಕೆಂದು ಬೇಡಿಕೆಯನ್ನಿಟ್ಟಿದೆ.
ಈ ಪತ್ರಕ್ಕೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ಹಿಡಿದು ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ವಿನಯ್ ರಾಜ್‌ಕುಮಾರ್, ಪವನ್ ಕುಮಾರ್, ನಟ ಸುದೀಪ್ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕುವ ಮೂಲಕ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.