Theerthahalli: ವಾಹನ ಚಲಾಯಿಸುವ ವೇಳೆಯೇ ಕುಸಿದು ಬಿದ್ದು ಯುವಕ ದುರ್ಮರಣ!
ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ತೆರಳುವ ವೇಳೆ ದುರ್ಘಟನೆ
Team Udayavani, Sep 4, 2024, 7:10 PM IST
ತೀರ್ಥಹಳ್ಳಿ: ಹೊದಲದ ಕೌದಳ್ಳಿ ಸಮೀಪದ ಹೊಸಗದ್ದೆಯ ಯುವಕನೊಬ್ಬ ವಾಹನ ಚಲಾಯಿಸುವ ವೇಳೆಯೇ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಸಂತೋಷ (34 ವರ್ಷ) ಮೃತ ಪಟ್ಟ ದುರ್ದೈವಿ. ಬುಧವಾರ ಮಧ್ಯಾಹ್ನದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ದ್ವಿ ಚಕ್ರ (ಸ್ಕೂಟಿ) ವಾಹನದಲ್ಲಿಯೇ ಹೊರಟು ಹೊದಲದ ಅಂಗಡಿಯೊಂದರ ಬಳಿ ಬಂದು ಕುಳಿತಿದ್ದಾರೆ. ನಂತರ ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ತೆರಳುವಾಗ ವಡ್ಡಿನಬೈಲು ಸಮೀಪ ಬರುವ ವೇಳೆ ನಿಯಂತ್ರಣ ತಪ್ಪಿ ದ್ವಿ ಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟಿಯೂ ಅವರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಪತ್ನಿ ಬಾಣಂತಿಯಾಗಿದ್ದು ಮೂರು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಲಾಗುತ್ತಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.