Health: ಚಿಕುನ್‌ ಗುನ್ಯಾಕ್ಕೆ ತುತ್ತಾಗಿದ್ದ ಶಾಸಕ ಸುರೇಶ್‌ ಕುಮಾರ್‌ಗೆ ಚಿಕಿತ್ಸೆ, ಬಿಡುಗಡೆ

ಐದಾರು ದಿನಗಳ ಕಾಲ ಐಸಿಯುನಲ್ಲಿದ್ದ ಬಿಜೆಪಿ ನಾಯಕ, ಕೆಲವು ವಾರಗಳ ವಿಶ್ರಾಂತಿಗೆ ಸೂಚಿಸಿದ ವೈದ್ಯರು

Team Udayavani, Sep 4, 2024, 10:57 PM IST

Suresh-Kuamr

ಬೆಂಗಳೂರು:  ರೂಪಾಂತರಿ ಚಿಕುನ್‌ ಗುನ್ಯಾದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ರಾಜಾಜಿನಗರ ಬಿಜೆಪಿ(BJP) ಹಿರಿಯ ಶಾಸಕ ಎಸ್‌. ಸುರೇಶ್‌ಕುಮಾರ್‌ (S.Suresh Kumar) ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.

ಕಳೆದ ಐದಾರು ದಿನಗಳ ಹಿಂದೆ ವಿಪರೀತ ಜ್ವರ, ಮೈ ಕೈ ನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ತೋರಿಸಿದಾಗ ಸೋಡಿಯಂ ಪ್ರಮಾಣ ಕಡಿಮೆ ಆಗಿರಬಹುದು ಎಂದು ಅಂದಾಜಿಸಲಾಗಿತ್ತು. ರಕ್ತದ ಮಾದರಿ ಪರೀಕ್ಷೆ ಮಾಡಿದಾಗ ವೈರಾಣು ಜ್ವರ ಇರಬಹುದೆಂದು ನಿರೀಕ್ಷಿಸಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಮೂರ್‍ನಾಲ್ಕು ದಿನಗಳಾಗಿದ್ದರೂ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಯಾವುದೇ ಸೋಂಕು ತಗುಲದಂತೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇಟ್ಟು ಚಿಕಿತ್ಸೆ ಕೊಡಲಾಯಿತು. ಐದಾರು ದಿನಗಳ ಚಿಕಿತ್ಸೆಯಿಂದ ಚೇತರಿಸಿಕೊಂಡ ಬಳಿಕ ಅವರನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕೃತಜ್ಞತೆ:
ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಡಿ. ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ‌ ಕಂಡಿದ್ದು, ಗುಣಮುಖನಾಗಿದ್ದೇನೆ.

ಸದ್ಯಕ್ಕೆ ಕನಿಷ್ಠ 3 ವಾರಗಳ ವಿಶ್ರಾಂತಿಯಲ್ಲಿದ್ದೇನೆ.‌  ಆರೋಗ್ಯ ಸುಧಾರಣೆಗಾಗಿ ನನ್ನ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ಕಾಳಜಿ ಹೊಂದಿರುವ ತಮ್ಮ ಹಿತೈಷಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ. ನನ್ನ ಆರೋಗ್ಯ ಸುಧಾರಣೆಗಾಗಿ ಹಾರೈಸಿದ ಗೆಳೆಯರಿಗೆ, ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್‌ ಕುಮಾರ್ ಅವರು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.