Ramanagara: ಬೈಕ್ ಗೆ ಲಾರಿ ಡಿಕ್ಕಿ; ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Team Udayavani, Sep 6, 2024, 11:07 AM IST
ರಾಮನಗರ: ಬೆಳ್ಳಂಬೆಳಿಗ್ಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯ ಸರ್ವೀಸ್ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಶುಕ್ರವಾರ (ಸೆ.06) ನಡೆದಿದೆ. ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ.
ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಗುರುಮೂರ್ತಿ (39), ಶೇಕ್ ಅಫೀಸ್ (45), ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಗಾರೆ ಕೆಲಸದವರು ಎನ್ನಲಾಗಿದೆ. ಗಾಯಾಳು ಹನುಮಂತಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯ ಸರ್ವೀಸ್ ರಸ್ತೆಯಲ್ಲಿ ಅಪಘಾತ ನಡೆದಿದೆ. ಈ ನಾಲ್ವರು ಗಾರೆ ಕೆಲಸಕ್ಕೆಂದು ಒಂದೇ ಬೈಕ್ ನಲ್ಲೊ ರಾಮನಗರದಿಂದ ಬಿಡದಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಲಾರಿ ಅಡ್ಡ ಬಂದು ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ.
ಸ್ಥಳಕ್ಕೆ ಎಎಸ್ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.