J-K Election: ಆರ್ಟಿಕಲ್ 370 ಇತಿಹಾಸಕ್ಕೆ ಸೇರಿದೆ, ಮತ್ತೆ ಎಂದೂ ಜಾರಿಯಾಗಲ್ಲ: ಅಮಿತ್ ಶಾ
370ನೇ ವಿಧಿ ರಾಜ್ಯದ ಯುವಕರ ಕೈಯಲ್ಲಿ ಶಸ್ತ್ರಾಸ್ತ್ರ, ಕಲ್ಲುಗಳ ಕೊಟ್ಟಿತು : ಕೇಂದ್ರ ಗೃಹ ಸಚಿವ
Team Udayavani, Sep 6, 2024, 8:01 PM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಿದ್ದ 370ನೇ ವಿಧಿ, ವಿಶೇಷ ಸ್ಥಾನಮಾನ ರದ್ದುಗೊಂಡು ಇತಿಹಾಸದ ಪುಟಕ್ಕೆ ಸೇರಿಯಾಗಿದೆ ಅದು ಮತ್ತೆ ಎಂದಿಗೂ ಪುನರ್‌ಸ್ಥಾಪನೆಯಾಗಲು ಸಾಧ್ಯವಿಲ್ಲ, ನಾವು ಅದನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ್ದರಿಂದ ಶುಕ್ರವಾರ ಬಿಜೆಪಿಯ ಚುನಾವಣೆ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ “ಜಮ್ಮು-ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ಆರ್ಟಿಕಲ್ 370 ಸಂವಿಧಾನದ ಭಾಗವಲ್ಲ. ಆ ವಿಧಿಯು ರಾಜ್ಯದ ಯುವಕರ ಕೈಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಕಲ್ಲುಗಳ ನೀಡಿತು. ಭಯೋತ್ಪಾದನೆಯ ಹಾದಿಯನ್ನು ತುಳಿಯಲು ಯುವಕರಿಗೆ ಅವಕಾಶ ಮಾಡಿಕೊಟ್ಟಿತು ಎಂದು ಕಿಡಿಕಾರಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಆರ್ಟಿಕಲ್ 370 ಪುನರ್ ಸ್ಥಾಪಿಸುವ ಬಗ್ಗೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದನ್ನು ಶಾ ಆಕ್ಷೇಪಿಸಿದರು. ಕೇಂದ್ರ ಸರಕಾರವು 2019ರಲ್ಲಿ 370ನೇ ವಿಧಿ ರದ್ದುಗೊಳಿಸಿದೆ. 2014ರ ಬಳಿಕ ಕಣಿವೆ ರಾಜ್ಯದಲ್ಲಿ ಮೊದಲ ಬಾರಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರವು 2014ರವರೆಗೆ ವಿವಿಧ ರಾಜ್ಯ ಮತ್ತು ರಾಜ್ಯೇತರ ಶಕ್ತಿಗಳಿಂದ ಅಸ್ಥಿರತೆ ಎದುರಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ನಿಭಾಯಿಸಲು ಇತರ ಎಲ್ಲಾ ಸರ್ಕಾರಗಳು ತುಷ್ಟೀಕರಣದ ರಾಜಕೀಯ ಮಾಡಿದವು. ಆದರೆ, ಭಾರತ ಮತ್ತು ಜಮ್ಮು ಮತ್ತು ಕಾಶ್ಮೀರದ ಇತಿಹಾಸವನ್ನು ಬರೆಯುವಾಗಲೆಲ್ಲಾ, 2014 ಮತ್ತು 2024 ರ ನಡುವಿನ ಅವಧಿಯನ್ನು ಸುವರ್ಣ ಅಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಅಮಿತ್ ಶಾ ಹೇಳಿದ್ದಾರೆ.
JKNC के एजेंडे को कांग्रेस का मौन समर्थन प्राप्त है, लेकिन धारा 370 अब इतिहास बन चुकी है और भाजपा कभी भी धारा 370 को वापस नहीं आने देगी। pic.twitter.com/HAss9pk33l
— Amit Shah (@AmitShah) September 6, 2024
ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖಾಂಶಗಳು:
* ಜಮ್ಮು-ಕಾಶ್ಮೀರದ ರಜೌರಿ ಬಳಿ ಹೊಸ ಪ್ರವಾಸಿ ಕೇಂದ್ರ ರೂಪುಗೊಳ್ಳಲಿದೆ ಹಾಗೂ ಕಣಿವೆ ರಾಜ್ಯದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆ.
ಟಿಕಾ ಲಾಲ್ ತಾಪ್ಲೂ ವಿಸ್ತಪಿತ್ ಸಮಾಜ ಪುನರ್ವಸ ಯೋಜನೆ ಅಡಿಯಲ್ಲಿ ಕಾಶ್ಮೀರಿ ಪಂಡಿತರ ಪುನರ್ವಸತಿಗೆ ಬಿಜೆಪಿ ಭರವಸೆ ನೀಡಿತು. ಹಾಗೆಯೇ ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ ಮತ್ತು ಆಂತರಿಕವಾಗಿ ನಿರ್ಲಕ್ಷಿಸಲ್ಪಟ್ಟ ವಾಲ್ಮೀಕಿ ಮತ್ತು ಗೂರ್ಖಾ ಸಮುದಾಯಗಳ ನಿರಾಶ್ರಿತರಿಗೆ ಬೆಂಬಲವನ್ನು ತ್ವರಿತಗೊಳಿಸುತ್ತದೆ.
* ‘ಮಾ ಸಮ್ಮಾನ್ ಯೋಜನೆ’ ಅಡಿಯಲ್ಲಿ ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ ₹ 18,000 ನೀಡುವ ಭರವಸೆ.
* ಉಜ್ವಲ ಯೋಜನೆಯಡಿ ವರ್ಷಕ್ಕೆ ಎರಡು ಉಚಿತ ಸಿಲಿಂಡರ್, . ಪ್ರಗತಿ ಶಿಕ್ಷಾ ಯೋಜನೆಯಡಿ, ಪ್ರಯಾಣ ಭತ್ಯೆಯಾಗಿ ಕಾಲೇಜು ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹ 3,000 ಘೋಷಣೆ
* ಜಮ್ಮು ನಗರದಲ್ಲಿ ಐಟಿಗಾಗಿ ವಿಶೇಷ ಆರ್ಥಿಕ ವಲಯ, ಶ್ರೀನಗರದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಮತ್ತು ಗುಲ್ಮಾರ್ಗ್ ಮತ್ತು ಪಹಲ್ಗಾಮ್ ಅನ್ನು ಆಧುನಿಕ ಪ್ರವಾಸಿ ತಾಣಗಳಾಗಿ ಅಭಿವೃದ್ಧಿ.
* ಅಹಮದಾಬಾದ್‌ನ ಸಬರಮತಿ ರಿವರ್‌ಫ್ರಂಟ್‌ನ ಮಾದರಿಯಲ್ಲಿ ಜಮ್ಮುವಿನ ತಾವಿ ನದಿಯ ಮುಂಭಾಗ ಅಭಿವೃದ್ಧಿ ಮತ್ತು ಶ್ರೀನಗರದ ದಾಲ್ ಸರೋವರದ ಸುತ್ತಲೂ ಜಲ ಕ್ರೀಡೆಗಳು ಮತ್ತು ಪ್ರವಾಸೋದ್ಯಮ ಉತ್ತೇಜಿಸಲು ಪಕ್ಷ ಗುರಿ ಹೊಂದಿದೆ.
* ಬಾಕಿ ಉಳಿದಿರುವ ವಿದ್ಯುತ್ ಮತ್ತು ನೀರಿನ ಬಿಲ್‌ಗಳಿಂದ ಪರಿಹಾರ, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಉಚಿತ ವಿದ್ಯುತ್ ಮತ್ತು ‘ಹರ್ ಘರ್ ನಲ್ ಸೇ ಜಲ್’ ಯೋಜನೆಯ ಮೂಲಕ ಕುಡಿಯುವ ನೀರಿನ ಭರವಸೆ.
ಜಮ್ಮು-ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಸೆ.18, ಸೆ.25 ಹಾಗೂ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.