![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 7, 2024, 4:41 PM IST
ಕಲಬುರಗಿ: 10 ವರ್ಷಗಳ ನಂತರ ತೊಗರಿ ನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ನಿಗದಿಯಾಗಿದೆ.
ಸೆ.17ರ ಸಂಜೆ 4 ಗಂಟೆಗೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಿಗದಿಗೊಳಿಸಲಾಗಿದೆ.
ಕಲಬುರಗಿಯಲ್ಲಿ ಪ್ರಸಕ್ತ ಸಾಲಿನ 19ನೇ ಸಚಿವ ಸಂಪುಟ ಸಭೆ ಎಂಬುದಾಗಿ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳು ಸೆ.17ರಂದು ಬೆಳಗ್ಗೆ 9 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಸಂಪುಟದ ಎದುರು ಕಳುಹಿಸಬಹುದಾದ ವಿಷಯಗಳನ್ನು ಮುಂದಿನ 5 ದಿನದೊಳಗೆ ಆಯಾ ಇಲಾಖೆಗಳು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಲಬುರಗಿಯಲ್ಲಿ ಈ ಹಿಂದೆ 2014ರ ನ.28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದರೆ ಈಗ 10 ವರ್ಷಗಳ ನಂತರ ಅವರದ್ದೇ ನೇತೃತ್ವದಲ್ಲಿ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ 2ನೇ ಸಂಪುಟ ಸಭೆ ಇದಾಗಲಿದೆ. 2010ರಲ್ಲಿ ಖಮರುಲ್ ಇಸ್ಲಾಂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಯಡಿಯೂರಪ್ಪ ನೇತೃತ್ವದಲ್ಲಿ ಸತತವಾಗಿ 2008ರ ಸೆ.26, 2009ರ ಆ.27 ಹಾಗೂ 2010ರ ಅ.10ರಂದು ಕಲಬುರಗಿಯಲ್ಲಿ ಸಂಪುಟದ ಸಭೆಗಳು ನಡೆದಿವೆ.
ಇದಕ್ಕೂ ಮುಂಚೆ 1982ರಲ್ಲಿ ಗುಂಡೂರಾವ್ ಸಿಎಂ ಆಗಿದ್ದಾಗ ಕಲಬುರಗಿಯಲ್ಲಿ, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ 2012ರ ಅ.18ರಂದು ಸಂಪುಟ ಸಭೆ ನಡೆದಿವೆ.
ಹಿಂದಿನ ಸಂಪುಟ ಸಭೆಗಳ ಮೇಲೆ ಒಂದು ನೋಟ: ಈ ಹಿಂದೆ ನಡೆದ ಸಚಿವ ಸಂಪುಟ ಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳಲ್ಲಿ ಶೇ.50ರಷ್ಟು ಮಾತ್ರ ಅನುಷ್ಠಾನಗೊಂಡಿವೆ. ಯಾದಗಿರಿ ಜಿಲ್ಲಾ ಘೋಷಣೆ, ರಾಯಚೂರಲ್ಲಿ ಕೃಷಿ ವಿವಿ ಸ್ಥಾಪನೆ, ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ವಿವಿ ಸ್ಥಾಪನೆ, ಬಾಗಲಕೋಟೆಯಲ್ಲಿ ತೋಟಗಾರಿಕೆ ವಿವಿ ಸ್ಥಾಪನೆ, ಮರ್ತೂರಿನಲ್ಲಿ ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ, ಸರ್ಕಾರದ ವತಿಯಿಂದಲೇ ವಾಲ್ಮೀಕಿ ಜಯಂತಿ ಆಚರಣೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂ ಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು.
–ಹಣಮಂತರಾವ ಭೈರಾಮಡಗಿ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.