Vijayapura: ಮಹಾನಗರ ಪಾಲಿಕೆಯಲ್ಲಿ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ
Team Udayavani, Sep 8, 2024, 11:23 AM IST
ವಿಜಯಪುರ: ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ಶನಿವಾರ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರತಿ ವರ್ಷ ಪಾಲಿಕೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಈ ಬಾರಿ ಗಣೇಶ ಮೂರ್ತಿ ಕೂರಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದ್ಯಸರು, ಇತರರು ರಾತ್ರಿ 11 ಗಂಟೆ ಸುಮಾರಿಗೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.
ಪಾಲಿಕೆಯ ಪ್ರವೇಶ ಕಟ್ಟಡದಲ್ಲಿ ಸದಸ್ಯರಾದ ರಾಜಶೇಖರ್ ಮಗಿಮಠ, ಕಿರಣ್ ಪಾಟೀಲ್, ರಾಹುಲ್ ಜಾಧವ್, ಜವಾಹರ್ ಗೋಸ್ವಾವಿ, ಮಲ್ಲಿಕಾರ್ಜುನ್ ಗಡಗಿ, ಶಿವರುದ್ರ ಬಾಗಲಕೋಟೆ ಇತರರು ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಅಲ್ಲದೆ, ಈ ವೇಳೆ ಜಮೀರ್ ಬಾಂಗಿ, ಬಂದೆ ನಮಾಜ್ ಬೀಳಗಿ, ರಾಜೇಶ್ ದೇವಗಿರಿ ಇದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಶಿವರುದ್ರ ಬಾಗಲಕೋಟೆ, ಪ್ರತಿ ವರ್ಷ ಪಾಲಿಕೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆ ಮಾಡಿಲ್ಲ. ಆದ್ದರಿಂದ ಈ ವಿಷಯ ತಿಳಿದ ಕೂಡಲೇ ರಾತ್ರಿ ಹೋಗಿ ಗಣೇಶ ಮೂರ್ತಿ ಕೂರಿಸಿದ್ದೇವೆ. ಈ ವೇಳೆ ಕಾಂಗ್ರೆಸ್ ನವರು ಕೂಡ ಇದ್ದರು ಎಂದು ತಿಳಿಸಿದರು.
ಸ್ಥಳಕ್ಕೆ ಜಲನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದರು. ಕಳೆದ ಜುಲೈನಲ್ಲೂ ಪಾಲಿಕೆ ಕಟ್ಟಡದಲ್ಲಿ ಅಂಬೇಡ್ಕರ್ ಮೂರ್ತಿ ಇಡಲಾಗಿತ್ತು. ಈಗ ಗಣೇಶ ಇಟ್ಟಿರುವ ಜಾಗದ ಸ್ವಲ್ವ ದೂರದ ಮುಂಭಾಗದಲ್ಲೇ ಅಂಬೇಡ್ಕರ್ ಮೂರ್ತಿ ಇಡಲಾಗಿತ್ತು. ಆಗ ರಾತೋರಾತ್ರಿ ಅಂಬೇಡ್ಕರ್ ಮೂರ್ತಿ ತೆರವು ಮಾಡಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.