Manipal ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು: ಪ್ರಕರಣ ದಾಖಲು
Team Udayavani, Sep 9, 2024, 12:15 AM IST
ಉಡುಪಿ: ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ. 6ರಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿಂಡಿಕೇಟ್ ಸರ್ಕಲ್ ಮಧ್ಯಭಾಗದಲ್ಲಿ ಮುಖ್ಯಮಂತ್ರಿಗಳ ಪ್ರತಿಕೃತಿಯನ್ನು ತಂದು ನಿಲ್ಲಿಸಿದ್ದು, ಆರೋಪಿಗಳಾದ ಗಿರೀಶ್ ಅಂಚನ್ ಹಾಗೂ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಮುಖ್ಯಮಂತ್ರಿಯವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.
ಅನಂತರ ಆರೋಪಿ ಅಭಿರಾಜ್ ಶೆಟ್ಟಿಯು ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದುಕೊಂಡು ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು ಎಂದು ಕಾಂಗ್ರೆಸ್ ಮುಖಂಡ ಸೌರಭ್ ಬಲ್ಲಾಳ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.