![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 9, 2024, 12:33 AM IST
ಕೈಕಂಬ ಸಮೀಪದ ಚೇರು ಎಂಬಲ್ಲಿ ಹೆದ್ದಾರಿಗೆ ನುಗ್ಗಿದ ನದಿ ನೀರು.
ಸುಬ್ರಹ್ಮಣ್ಯ: ಘಟ್ಟ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ರವಿವಾರ ಸುಬ್ರಹ್ಮಣ್ಯ ಸಮೀಪದ ತೋಡಿನಲ್ಲಿ ಭಾರೀ ಪ್ರಮಾಣದ ನೀರು ಹರಿದು ಹೆದ್ದಾರಿಗೆ ನುಗ್ಗಿದ್ದು, ಸೇತುವೆ ಮುಳುಗಡೆಗೊಂಡಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬದ ಹೊಳೆಯಲ್ಲಿ ಹರಿದ ನೀರು ಸುಬ್ರಹ್ಮಣ್ಯ – ಧರ್ಮಸ್ಥಳ ಹೆದ್ದಾರಿಯ ಚೇರು ಎಂಬಲ್ಲಿ ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ತೊಡಕುಂಟಾಯಿತು. ಅಲ್ಲದೆ, ಕಡಬ – ಸುಬ್ರಹ್ಮಣ್ಯ ಹೆದ್ದಾರಿಯ ಕೈಕಂಬ ಸೇತುವೆಯೂ ಸ್ವಲ್ಪ ಹೊತ್ತು ಮುಳುಗಡೆಗೊಂಡ ಪರಿಣಾಮ ಕೆಲವು ತಾಸು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಸುಳ್ಯ ಭಾಗದಲ್ಲೂ ಶನಿವಾರ, ರವಿವಾರ ಸಾಧಾರಣ ಮÙಯಾಗಿದೆ.
ದ.ಕ. ಜಿಲ್ಲೆಯ ಕೆಲವೆಡೆ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಮಳೆಯಾದ ವರದಿಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ಕೆಲ ಕಾಲ ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕರಾವಳಿಯಲ್ಲಿ ಸೆ.9ರಂದು ಬೆಳಗ್ಗೆ 8.30ರ ವರೆಗೆ ಆರೆಂಜ್ ಅಲರ್ಟ್ ಬಳಿಕ ಸೆ.11ರ ವರೆಗೆ “ಎಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ 27.8 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.9 ಡಿ.ಸೆ. ಕಡಿಮೆ ಮತ್ತು 24.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.5 ಡಿ.ಸೆ. ಏರಿಕೆ ಕಂಡಿತ್ತು.
ಉಡುಪಿ: ಲಘು ಮಳೆ
ಉಡುಪಿ: ಜಿಲ್ಲೆಯ ಉಡುಪಿ, ಬೈಂದೂರು, ಕಾರ್ಕಳ, ಕುಂದಾಪುರ, ಹೆಬ್ರಿ, ಕಾಪು ಸುತ್ತಮುತ್ತಲಿನ ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣ ನಡುವೆ ಬಿಟ್ಟುಬಿಟ್ಟು ಮಳೆಯಾಗಿದೆ. ಸೋಮವಾರ ತಡರಾತ್ರಿ, ರವಿವಾರ ಉಡುಪಿ, ಮಣಿಪಾಲ ಸುತ್ತಮುತ್ತ ಸ್ವಲ್ಪ ಹೊತ್ತು ಧಾರಾಕಾರ ಮಳೆಯಾಗಿದೆ.
ಗಡಿಕಲ್ಲು ಮುಖ್ಯ ರಸ್ತೆ ಬದಿ ಕುಸಿತ: ಘನ ವಾಹನ ಸಂಚಾರ ನಿರ್ಬಂಧ
ಸುಳ್ಯ: ಕೊಲ್ಲಮೊಗ್ರು- ಕಲ್ಮಕಾರು ಸಂಪರ್ಕ ರಸ್ತೆಯ ಗಡಿಕಲ್ಲಿನಲ್ಲಿ ರಸ್ತೆ ಬದಿಯ ತೋಡಿನ ಭಾಗದಲ್ಲಿ ಮಣ್ಣು ಕುಸಿದಿರುವ ಕಾರಣ ಘನ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇಲ್ಲಿ ತಾತ್ಕಾಲಿಕವಾಗಿ ಮರಳಿನ ಚೀಲ ಅಳವಡಿಸಿ ತಡೆಗೋಡೆ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ಸಮಸ್ಯೆ
ಘನ ವಾಹನ ಸಂಚಾರ ನಿರ್ಬಂಧಿಸಿದ ಕಾರಣ ಕಲ್ಮಕಾರು ಭಾಗಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸಲಾಗದೆ ಆ ಭಾಗದ ಜನರಿಗೆ ತೀವ್ರ ಸಮಸ್ಯೆ ಉಂಟಾಗಿದೆ.
You seem to have an Ad Blocker on.
To continue reading, please turn it off or whitelist Udayavani.