![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 9, 2024, 6:50 AM IST
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ 13ರಂದು ಸಂಸತ್‌ನಲ್ಲಿ ನಡೆದ ಹೊಗೆ ಬಾಂಬ್ ದಾಳಿ ಪ್ರಕರಣದ ಆರೋಪಿಗಳು ಭಾರತದ ಪ್ರಜಾಸತ್ತೆಗೆ ಕಳಂಕ ತರುವ ಉದ್ದೇಶ ಹೊಂದಿದ್ದರು. ತ್ವರಿತವಾಗಿ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಬೇಕು, ಅಧಿಕಾರ, ಶ್ರೀಮಂತಿಕೆ ಹೊಂದಬೇಕು ಎಂಬ ಉದ್ದೇಶವೂ ಅವರದ್ದಾಗಿತ್ತು!
ಹೀಗೆಂದು ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ 1,000 ಪುಟಗಳ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಕಳೆದ ಜೂನ್‌ನಲ್ಲೇ ಪಟಿಯಾಲಾ ಹೌಸ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಜುಲೈನಲ್ಲಿ ಪೂರಕ ಆರೋಪಪಟ್ಟಿಯನ್ನೂ ಸಲ್ಲಿಸಲಾಗಿದೆ. ಆದರೆ ಚಾರ್ಜ್‌ಶೀಟ್‌ನಲ್ಲಿರುವ ಅಂಶಗಳು ಈಗ ಬಹಿರಂಗಗೊಂಡಿದೆ. ಆರೋಪಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿ, ದಾಳಿಗೆ ಸುಮಾರು 2 ವರ್ಷಗಳು ಸಂಚು ರೂಪಿಸಿದ್ದರು. 2022ರ ಫೆಬ್ರವರಿ ಯಲ್ಲಿ ಮೈಸೂರಿನಲ್ಲಿ ಮೊದಲ ಭೇಟಿ ನಡೆದಿತ್ತು. ಪ್ರಮುಖ ಆರೋಪಿ ಮೈಸೂರಿನ ಮನೋರಂಜನ್ ತೀವ್ರಗಾಮಿತ್ವದ ಮಾವೋವಾದಿ ಚಿಂತನೆ ಹೊಂದಿದ್ದ. ಈತನೇ ಪ್ರಮುಖ ಸಂಚುಕೋರ ನಾಗಿದ್ದು, ಇತರರಿಗೆ ದಾಳಿ ನಡೆಸಲು ಪ್ರಚೋದನೆ ಕೊಟ್ಟಿದ್ದ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.