Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ
Team Udayavani, Sep 9, 2024, 1:02 PM IST
ಚೆನ್ನೈ: ಕಾಲಿವುಡ್ ಸ್ಟಾರ್ ನಟ ಜಯಂ ರವಿ (Actor Jayam Ravi) ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಸುದ್ದಿ ಕಳೆದ ಕೆಲ ತಿಂಗಳ ಹಿಂದೆ ಕಾಲಿವುಡ್ ವಲಯದಲ್ಲಿ ಹರಿದಾಡಿತ್ತು.
ಇದೀಗ ವಿಚ್ಚೇದನದ ಬಗ್ಗೆ ಸ್ವತಃ ಜಯಂರವಿ ಅವರೇ ಅಧಿಕೃತವಾಗಿ ವಿಚಾರವನ್ನು ಬಹಿರಂಗಪಡಿಸಿದ್ದು 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಸೋಮವಾರ(ಸೆ.9ರಂದು) ಪ್ರಕಟಣೆ ಮೂಲಕ ತಮ್ಮ ವಿಚ್ಚೇದನದ ಸುದ್ದಿಯನ್ನು ಅವರು ಬಹಿರಂಗ ಪಡಿಸಿದ್ದಾರೆ.
“ಬಹಳ ಯೋಚನೆ ಮತ್ತು ಚರ್ಚೆಗಳ ನಂತರ ಆರತಿ ಅವರೊಂದಿಗಿನ ನನ್ನ ವಿವಾಹ ಸಂಂಬಂಧಕ್ಕೆ ವಿಚ್ಚೇದನ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ಮಾಡಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ.
Grateful for your love and understanding.
Jayam Ravi pic.twitter.com/FNRGf6OOo8
— Jayam Ravi (@actor_jayamravi) September 9, 2024
“ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಮತ್ತು ನಮ್ಮ ಕುಟುಂಬದ ಸದಸ್ಯರ ಗೌಪ್ಯತೆಯನ್ನು ಗೌರವಿಸಲು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ಊಹಾಪೋಹಾ ಅಥವಾ ಆರೋಪಗಳನ್ನು ಮಾಡದಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಮತ್ತು ಈ ವಿಷಯ ಖಾಸಗಿಯಾಗಿ ಉಳಿಯಲಿ” ಎಂದು ಜಯಂ ಬರೆದುಕೊಂಡಿದ್ದಾರೆ.
“ನನ್ನ ಆದ್ಯತೆಯು ಯಾವಾಗಲೂ ಒಂದೇ ಆಗಿರುತ್ತದೆ – ನನ್ನ ಪ್ರೀತಿಯ ಪ್ರೇಕ್ಷಕರಿಗೆ ನನ್ನ ಚಲನಚಿತ್ರಗಳ ಮೂಲಕ ಸಂತೋಷ ಮತ್ತು ಮನರಂಜನೆಯನ್ನು ನೀಡುವುದನ್ನು ಮುಂದುವರಿಸುವುದಾಗಿ” ಅವರು ಹೇಳಿದ್ದಾರೆ.
ಈ ಹಿಂದೆಯೇ ಇಬ್ಬರ ನಡುವಿನ ವಿಚ್ಚೇದನ ವಿಚಾರ ಸುದ್ದಿಯಾಗಿತ್ತು. ಜಯಂ ರವಿ ಅವರ ಪತ್ನಿ ಆರತಿ ಅವರು ಪತಿ ಜಯಂ ಮತ್ತು ಅವರ ಮಕ್ಕಳಾದ ಆರವ್ ಮತ್ತು ಅಯಾನ್ ಅವರ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಿಂದ ಡಿಲೀಟ್ ಮಾಡಿರುವುದು ವಿಚ್ಛೇದನದ ವಿಚಾರದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು.
ಜಯಂ ರವಿ – ಆರತಿ ಜೂನ್ 2009 ರಲ್ಲಿ ವಿವಾಹವಾಗಿದ್ದರು. ಅವರಿಗೆ ಆರವ್ ಮತ್ತು ಅಯಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.