Ello Jogappa Ninna Aramane Movie; ಜೋಗಪ್ಪನಿಗೆ ಮೊದಲ ಹಾಡಿನ ಸಂಭ್ರಮ
Team Udayavani, Sep 9, 2024, 5:11 PM IST
ಹೊಸಬರ “ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. “ಹೌದ ಹುಲಿಯಾ..’ ಎಂಬ ಮಾಸ್ ಸಾಂಗ್ ರಿಲೀಸ್ ಆಗಿದ್ದು, ರವೀಂದ್ರ ಮುದ್ದಿ ಸಾಹಿತ್ಯ ಒದಗಿಸಿದ್ದಾರೆ. ಶಿವೋಂ ಸಂಗೀತವಿದ್ದು, ರವೀಂದ್ರ ಸೊರಗ್ವಿ, ವಿಶಾಕ್ ನಾಗಲಾಪುರ, ಶಿವೋಮ್ ಧ್ವನಿಯಾಗಿದ್ದಾರೆ. ಉತ್ತರ ಕರ್ನಾಟಕ ಭಾಷೆಯಲ್ಲಿ ಮೂಡಿಬಂದಿರುವ ಹಾಡಿಗೆ ನಾಯಕ ಅಂಜನ್ ನಾಗೇಂದ್ರ ಬೊಂಬಾಟ್ ಆಗಿ ಹೆಜ್ಜೆ ಹಾಕಿದ್ದಾರೆ. ಹಯವದನ ಈ ಸಿನಿಮಾದ ನಿರ್ದೇಶಕರು.
ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರಂತೆ. ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ “ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್ ನಡೆಸಿದ್ದಾರೆ. ಈ ಚಿತ್ರ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ.
ಲವ್, ಸೆಂಟಿಮೆಂಟ್, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸಿದ್ದು, ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ದಿನೇಶ್ ಮಂಗಳೂರು, ಬಿರಾದಾರ್ ತಾರಾಬಳಗದಲ್ಲಿದ್ದಾರೆ. ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.