Eshwarappa ಏನೂ ಗೊತ್ತಿಲ್ಲದ ಸಿದ್ದು ಪತ್ನಿ ಹೆಸರು ಥಳಕು ಹಾಕಿಕೊಂಡಿದ್ದಕ್ಕೆ ನೋವಾಗಿದೆ
Team Udayavani, Sep 9, 2024, 7:27 PM IST
ಶಿವಮೊಗ್ಗ: ಸಿದ್ದರಾಮಯ್ಯ ಭ್ರಷ್ಟಾಚಾರಕ್ಕೆ ಅವರ ಪತ್ನಿ ಹೆಸರು ಚರ್ಚೆಯಾಗುತ್ತಿದೆ. ವ್ಯವಹಾರ ಮಾಡುವವರು ಆದಾಯ ತೆರಿಗೆ ಇತ್ಯಾದಿಗಳಿಗೆ ಮಡದಿಯ ಸಹಿ ಹಾಕಿಸಿಕೊಳ್ಳುವುದು ಸಾಮಾನ್ಯ. ಅದೇ ರೀತಿ ಪಾರ್ವತಮ್ಮ ಅವರು ಸಹಿ ಹಾಕಿರಬಹುದು. ಪ್ರಕರಣ ಏನೆಂದೇ ಅವರಿಗೆ ಗೊತ್ತಿರಲಿಕ್ಕಿಲ್ಲ. ಸಾರ್ವಜನಿಕವಾಗಿ ಎಂದೂ ಗುರುತಿಸಿಕೊಳ್ಳದ ಹೆಣ್ಣುಮಗಳ ಹೆಸರು ಬಳಕೆಯಾಗುತ್ತಿರುವುದು ನನಗೂ ನೋವು ತಂದಿದೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ದಿನ 849 ನಿವೇಶನ ಹಂಚಿಕೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದ ಅಂದಿನ ಮುಡಾ ಅಧ್ಯಕ್ಷರ ವಿರುದ್ಧ ಸರ್ಕಾರ ತಕ್ಷಣ ಕಾನೂನು ಕ್ರಮ ಜರುಗಿಸಬೇಕು. ಹಿಂದೆ ಯಾವ ಪಕ್ಷದಲ್ಲಿ ಅವರಿದ್ದರು ಎಂಬುದು ಮುಖ್ಯವಲ್ಲ. ಈಗ ಅವರು ಮಾಡಿರುವ ಅಕ್ರಮ ಬಹಿರಂಗವಾಗಿದೆ.
ತನ್ನ ಅಕ್ರಮ ವ್ಯವಹಾರ ರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದಲೇ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಮುಡಾದಲ್ಲಿ ಇಂತಹ ಹಗರಣ ಎಷ್ಟು ನಡೆದಿವೆಯೋ ಎಂಬ ಅನುಮಾನ ಮೂಡುತ್ತಿದೆ. ಇದು ಮೈಸೂರು ಮಾತ್ರವಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆದಿರಬಹುದು. ಸಿದ್ದರಾಮಯ್ಯ ಕೂಡಲೇ ತನಿಖೆಗೆ ಆದೇಶ ನೀಡಬೇಕು. ಭ್ರಷ್ಟಾಚಾರವನ್ನು ಯಾವ ಪಕ್ಷದವರು ಮಾಡಿದರೂ ಶಿಕ್ಷೆ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.