Bengaluru: ಕೈ ಮುಗಿದು ಬೇಡಿದರೂ ಬಿಡದೆ 60ರ ವೃದ್ಧೆ ಮೇಲೆ ಅತ್ಯಾಚಾರ!
ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಪಟ್ಟಿಯಲ್ಲಿ ಎಸ್‌ಐಟಿ ಉಲ್ಲೇಖ
Team Udayavani, Sep 10, 2024, 7:00 AM IST
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ CIDವಿಶೇಷ ತನಿಖಾ ತಂಡ (SIT)ವು ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2ನೇ ಆರೋಪಪಟ್ಟಿಯನ್ನು ಸಲ್ಲಿಸಿದೆ. 60 ವರ್ಷದ ಮನೆ ಕೆಲಸದಾಕೆ ಕೈ ಮುಗಿದು ಬೇಡಿಕೊಂಡರೂ ಬಿಡದೆ ಅತ್ಯಾಚಾರ ಎಸಗಿದ್ದಲ್ಲದೆ, ವೀಡಿಯೋ ಮಾಡಿಕೊಂಡಿರುವ ಬಗ್ಗೆ ಅದರಲ್ಲಿ ಉಲ್ಲೇಖೀಸಲಾಗಿದೆ.
ತನ್ನ ಮನೆಯಲ್ಲಿ ಕೆಲಸಕ್ಕಿದ್ದ ಸುಮಾರು 60 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ವೀಡಿಯೋ ಮಾಡಿಕೊಂಡಿದ್ದರ ಸಹಿತ ಪ್ರಜ್ವಲ್ ವಿರುದ್ಧ 1,652 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿದೆ. ಸಿಆರ್‌ಪಿಸಿ 164ರ ಅಡಿ ಸಂತ್ರಸ್ತೆ ಹಾಗೂ ಪ್ರಮುಖ ಸಾಕ್ಷಿದಾರರ ಹೇಳಿಕೆಯನ್ನು ದಾಖಲಿಸಲಾಗಿದೆ. 113 ಮಂದಿ ಸಾಕ್ಷಿದಾರರು ಹಾಗೂ ಡಿಜಿಟಲ್ ಸಾಕ್ಷ್ಯಾಧಾರ, FSL ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.
ಕೆಲಸದಾಕೆ ಮೇಲೆ ಅತ್ಯಾಚಾರ
ಹೊಳೆನರಸೀಪುರದಲ್ಲಿ ಮನೆ ಕೆಲಸಕ್ಕೆ ಬರುತ್ತಿದ್ದ 60 ವರ್ಷದ ಸಂತ್ರಸ್ತೆಯನ್ನು ಆರೋಪಿ ಪ್ರಜ್ವಲ್ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಕೃತ್ಯ ಎಸಗುವಾಗ ತನ್ನದೇ mobileನಲ್ಲಿ ವೀಡಿಯೋ ಮಾಡಿರುವುದು ಪತ್ತೆಯಾಗಿದೆ. ಸಂತ್ರಸ್ತೆ ಕೈ ಮುಗಿದು ಬಿಟ್ಟುಬಿಡುವಂತೆ ಕೋರಿದರೂ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ವೀಡಿಯೊ ವೈರಲ್ ಆದ ಬಳಿಕ ಮೇ 5ರಂದು ಎಸ್‌ಐಟಿಯು ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು.
ಇದಲ್ಲದೆ ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಸಂಬಂಧ ಪ್ರಜ್ವಲ್ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ CIDಎಸ್‌ಐಟಿ ತನಿಖೆ ನಡೆಸಿದೆ. ಈ ಪೈಕಿ 47 ವರ್ಷದ ಮಹಿಳೆಯು ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್‌ಐಟಿಯು ಆ. 23ರಂದು ತಂದೆ-ಮಗನ ವಿರುದ್ಧ ಮೊದಲ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಎರಡನೇ ಪ್ರಕರಣದಲ್ಲಿ ಸೋಮವಾರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಮತ್ತೆರಡು ಪ್ರಕರಣಗಳ ತನಿಖೆ ಅಂತಿಮ ಹಂತದಲ್ಲಿವೆ ಎಂದು ಎಸ್‌ಐಟಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.