Hubballi: ಕರ್ತವ್ಯದಲ್ಲಿದ್ದ ಎಎಸ್ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ
ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದ ವೇಳೆ ಅವಘಡ
Team Udayavani, Sep 10, 2024, 7:36 PM IST
ಹುಬ್ಬಳ್ಳಿ: ನಗರದ ಕಿತ್ತೂರು ಚೆನ್ನಮ್ಮ ಹಾಗೂ ಸುತ್ತಮುತ್ತ ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಕೋರ್ಟ್ ವೃತ್ತ ಬಳಿ ಸೆ.10ರ ಮಂಗಳವಾರ ಕರ್ತವ್ಯದಲ್ಲಿದ್ದ ಎಎಸ್ಐ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ತೀವ್ರ ಗಾಯಗೊಂಡಿದ್ದಾರೆ.
ಫ್ಲೈ ಓವರ್ ಮೇಲೆ ಕಾರ್ಮಿಕರು ಕಬ್ಬಿಣದ ಸಲಾಕೆ(ರಾಡ್)ಗಳನ್ನು ಜೋಡಿಸುತ್ತಿರುವ ಸಂದರ್ಭದಲ್ಲಿ ಕೈಜಾರಿ ಉಪನಗರ ಪೊಲೀಸ್ ಠಾಣೆಯ ಎಎಸ್ಐ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದಿದೆ. ತೀವ್ರ ರಕ್ತಸ್ರಾವ ಉಂಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಮಗಾರಿ ಸ್ಥಳದಲ್ಲಿ ಯಾವುದೇ ರೀತಿಯ ಸುರಕ್ಷತಾ ಕ್ರಮಗಳನ್ನು ಗುತ್ತಿಗೆದಾರರು ತೆಗೆದುಕೊಂಡಿಲ್ಲವೆಂದು ತಿಳಿದುಬಂದಿದೆ.
ಕಬ್ಬಿಣದ ರಾಡ್ ಬಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಎಎಸ್ಐ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.