Alvas Education Foundation: ಆಳ್ವಾಸ್‌ನಲ್ಲಿ ನೂತನ ಕಾನೂನು ಕಾಲೇಜು ಆರಂಭ
2024-25 ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ: ಡಾ| ಮೋಹನ ಆಳ್ವ
Team Udayavani, Sep 11, 2024, 6:20 AM IST
ಮೂಡುಬಿದಿರೆ: ರಾಷ್ಟ್ರೀಯ, ಅಂತಾರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಹೆಗ್ಗಳಿಕೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜತೆಗೆ ನೂತನ ಕಾನೂನು ಕಾಲೇಜ್ ಅನ್ನು ಆರಂಭಿಸುತ್ತಿದೆ. ಈ ಶೈಕ್ಷಣಿಕ ವರ್ಷದಿಂದಲೇ 5 ವರ್ಷಗಳ, ಬಿಕಾಂ ಸಹಿತ ಎಲ್‌ಎಲ್‌ಬಿ ಮತ್ತು 3 ವರ್ಷಗಳ ಎಲ್‌ಎಲ್‌ಬಿ ಕೋರ್ಸಿಗೆ ದಾಖಲಾತಿ ಆರಂಭವಾಗಿದೆ ಎಂದು ಆಳ್ವಾಸ್ ಪ್ರವರ್ತಕ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಹೊಸ ಕಾನೂನು ಕಾಲೇಜ್ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಕ್ಕೆ(ಕೆಎಸ್‌ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್‌ಎಲ್‌ಬಿ ಪದವಿಯನ್ನು 60 ವಿದ್ಯಾರ್ಥಿ ಮಿತಿಯೊಂದಿಗೆ ಈ ವರ್ಷದಿಂದಲೇ ಆರಂಭಿಸಲು ಅನುಮತಿ ದೊರೆತಿದೆ.
ಕಾನೂನು ಶಿಕ್ಷಣದಲ್ಲಿ ಉತ್ತಮ ಅನುಭವ ಹೊಂದಿರುವ ಶಿಕ್ಷಕರನ್ನು ಈಗಾಗಲೇ ನೇಮಿಸಿದ್ದು, ಗುಣಾತ್ಮಕವಾದ ಕಾನೂನು ಶಿಕ್ಷಣಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕಟಿಬದ್ಧವಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಾಣಿಜ್ಯ ಅಥವಾ ವಿಜ್ಞಾನ ಶಾಖೆಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಬಿಕಾಂ ಎಲ್‌ಎಲ್‌ಬಿ ಪ್ರವೇಶಾತಿಗೆ ಅರ್ಹರು. ಯಾವುದೇ ಪದವಿ ಪೂರ್ಣಗೊಳಿಸಿ ರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು 3 ವರ್ಷಗಳ ಎಲ್‌ಎಲ್‌ಬಿ ಪದವಿಗೆ ದಾಖಲಾತಿಗೆ ಅರ್ಹತೆ ಪಡೆಯುತ್ತಾರೆ.
ವಿಪುಲ ಅವಕಾಶಗಳು
ಸುಸಜ್ಜಿತ ಕಾನೂನು ಗ್ರಂಥಾಲಯ, ಮೂಟ್ ಕೋರ್ಟ್ ಸಹಿತ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕಾನೂನು ಪದವೀಧರರು ನ್ಯಾಯವಾದಿಗಳಾಗಿ ಸ್ವಂತ ವೃತ್ತಿ ಆರಂಭಿಸುವುದಲ್ಲದೇ, ವಿವಿಧ ಕಂಪೆನಿಗಳಲ್ಲಿ ಸಲಹೆಗಾರರಾಗಿ, ವ್ಯವಹಾರ ಆಡಳಿತಾಧಿಕಾರಿಗಳಾಗಿ, ನ್ಯಾಯಾಂಗದ ವಿವಿಧ ಹುದ್ದೆಗಳಲ್ಲಿ ಶಾಸನ ರೂಪಿಸುವ ಪ್ರತಿನಿಧಿಗಳಾಗಿ ವೃತ್ತಿ ಕೈಗೊಳ್ಳುವ ಅಪಾರ ಅವಕಾಶಗಳಿವೆ.
ಸಮಾಜಕಾರ್ಯ, ಪತ್ರಿಕೋದ್ಯಮ, ಎಂಬಿಎ, ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್, ಸಿಎ, ಸಿಎಸ್ ಪದವೀಧರರು ಕಾನೂನು ಶಿಕ್ಷಣ ಪಡೆದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ನೈಪುಣ್ಯ ಪಡೆಯುವುದರೊಂದಿಗೆ ಹೆಚ್ಚಿನ ಉದ್ಯೋಗದ ಅವಕಾಶಗಳನ್ನು ಪಡೆಯಲು ಸಹಕಾರಿಯಾಗಲಿದೆ ಎಂದವರು ವಿವರಿಸಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಿಎ, ಸಿಎಸ್, ಎಸಿಸಿಎ, ಸಿಎಂಎಸ್ ಹಾಗೂ ಯುಪಿಎಸ್ಸಿ ಕೋರ್ಸ್‌ಗಳಿಗೆ ತರಬೇತಿಯ ಜತೆಗೆ ದೇಶದ ವಿವಿಧ ಕಾನೂನು ವಿವಿಗಳಿಗೆ ಪ್ರವೇಶ ಪಡೆಯಲು ಬಯಸುವ ಆಕಾಂಕ್ಷಿಗಳಿಗಿರುವ ಅರ್ಹತಾ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ ಎಂದೂ ಅವರು ತಿಳಿಸಿದರು. ಪದವಿ ಕಾಲೇಜಿನ ಪ್ರಾಚಾರ್ಯ ಡಾ| ಕುರಿಯನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.