Rain Alert: ಕರಾವಳಿಯಲ್ಲಿ ಎಲ್ಲೋ ಅಲರ್ಟ್‌; ಮಳೆ ಸಾಧ್ಯತೆ


Team Udayavani, Sep 11, 2024, 1:34 AM IST

Rain1

ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು, ಸೆ.11 ಮತ್ತು 12 ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ದ.ಕ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.

ಉಡುಪಿ ಜಿಲ್ಲಾದ್ಯಂತ ಮಂಗಳವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಬೈಂದೂರು, ಕುಂದಾಪುರ, ಹೆಬ್ರಿ, ಪಡುಬಿದ್ರಿ, ಕಾರ್ಕಳ, ಅಜೆಕಾರು, ಉಡುಪಿ, ಕಾಪು, ಬ್ರಹ್ಮಾವರ ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟುಬಿಟ್ಟು ಸಣ್ಣದಾಗಿ ಮಳೆ ಸುರಿದಿದೆ. ಮಂಗಳೂರಿನಲ್ಲಿ 29.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಕಡಿಮೆ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗು ವಾಡಿಕೆಗಿಂತ 0.7 ಡಿ.ಸೆ. ಹೆಚ್ಚಿತ್ತು.

ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ
ಮಡಿಕೇರಿ:
ಕೊಡಗು ಜಿಲ್ಲೆಯ ವಿವಿಧೆಡೆ ಮಳೆ ಮುಂದುವರಿದಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ಇಂಚು ಮಳೆಯಾಗಿದೆ. ಮಳೆ ತಾಲೂಕಿನಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣವಿತ್ತಾದರೂ 11 ಗಂಟೆಯ ಅನಂತರ ನಿರಂತರ ಮಳೆ ಸುರಿದಿದೆ. ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರ ಪೇಟೆ ಹಾಗೂ ಕುಶಾಲನಗರ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 26.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.43 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2712.85 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1380.25 ಮಿ.ಮೀ ಮಳೆಯಾಗಿತ್ತು.

ಕೊಟ್ಟಿಗೆಹಾರ: 7 ಸೆಂ.ಮೀ. ಮಳೆ
ಬೆಂಗಳೂರು: ಮಂಗಳ ವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಯಿತು. ಕ್ಯಾಸಲ್‌ರಾಕ್‌, ಹೊನ್ನಾವರ ಮತ್ತು ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 7 ಸೆಂ.ಮೀ. ಮಳೆ ಸುರಿಯಿತು.

ಗುರುವಾರ ಬೆಳಗ್ಗೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗಲಿದ್ದರೆ, ಉಳಿದಂತೆ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.